by
Tag: Karnataka News

ಯಾದಗಿರಿಯಲ್ಲಿ ಪತ್ರಕರ್ತನ ಅಪಹರಣ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ ಶಂಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಲುಂಬಿನಿ ಗಾರ್ಡನ್ ಬಳಿ ಪತ್ರಕರ್ತನೊಬ್ಬರನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಶಿಧರ ಕಾಲೊನಿ ಹೊಸಳ್ಳಿ ಕ್ರಾಸ್ ನಿವಾಸಿ ಹಾಗೂ ಕ್ರಾಂತಿ ಪತ್ರಿಕೆಯ ಪತ್ರಕರ್ತ ಸಾಗರ ಪ್ರೇಮಕುಮಾರ ದೇಸಾಯಿ (35) ಅಪಹರಣಕ್ಕೊಳಗಾದವರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಶನಿವಾರ ಬೆಳಿಗ್ಗೆ 11.30ರ ಸುಮಾರಿಗೆ ಮನೆಯಿಂದ ಸ್ಕೂಟಿಯಲ್ಲಿ ಹೊರಟಿದ್ದ ಸಾಗರ, 11.45ರಿಂದ 11.50ರ ನಡುವೆ ಲುಂಬಿನಿ ಗಾರ್ಡನ್ ಬಳಿ ತೆರಳುತ್ತಿದ್ದಾಗ ಕಾರಿನಲ್ಲಿ…
by

ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಗುರುಮಠಕಲ್ ತಾಲೂಕಿನ ಕಡೆಚೂರು -ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೇ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸತೀಶಕುಮಾರ ಎಂಬುವವರು ಸೈದಾಪುರ ಪೊಲೀಸ್ ಠಾಣೆಯಲ್ಲಿ ಸಿಲ್ ಕೆಮಿಕಲ್ ಕಂಪನಿ ವಿರುದ್ದ ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.ಕಂಪನಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಪಟ್ಟ ಮೇಲೆ ಕಾನೂನಿನ ಕ್ರಮ ಜರುಗಿಸುವಂತೇ…
by

ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ದಲಿತರು ಹಾಗೂ ಬಡ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ. ನಂ. 47/74-75) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಆತಂಕಕಾರಿ…
by

ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಬಾಲಕಿಯರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಕೆಪಿಎಸ್) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆ-ಕಾನೂನುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಶ್ರೀ ಶಿವರಾಜ್ ಕಟ್ಟಿಮನಿ ಹಾಗೂ ಶ್ರೀ ಮಲ್ಲಿಕಾರ್ಜುನ್ ಮನಗನಾಳ ಅವರು, ಬಾಲ್ಯ ವಿವಾಹ ನಿಷೇಧ…
by

ಯಾದಗಿರಿಯಲ್ಲಿ ವಿಷಕಾರಿ ದುಬೈ ಮರಗಳ ತೆರವು ಆರಂಭ: ಜಯ ಕರ್ನಾಟಕ ಮನವಿಗೆ ಅರಣ್ಯ ಇಲಾಖೆ ಸ್ಪಂದನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೌಂದರೀಕರಣ ಹೆಸರಲ್ಲಿ ಸರ್ಕಾರದ ಬೊಕ್ಕಸ ಹಾಳು ಮಾಡಿ ಮುಖ್ಯ ರಸ್ತೆ ವಿಭಜಕ ಮದ್ಯದಲ್ಲಿ ನೆಟ್ಟಿದ್ದ ವಿಷಕಾರುವ ದುಬೈ ಗಿಡಗಳನ್ನು ನೆಲಸಮ ಮಾಡುವ ಕಾರ್ಯಕ್ಕೆ ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಕಾರ್ಯಾರಂಭ ಮಾಡಿದೆ. ಇಲ್ಲಿನ ಗಂಜ್ ವೃತ್ತದಿಂದ ಗಿಡಗಳ ತೆರವು ಪ್ರಾರಂಭವಾಗಿದ್ದು, ಶೀಘ್ರ ನಗರದ ಎಲ್ಲ ದುಬೈ ವಿಷ ವೃಕ್ಷಗಳ ಕಡಿದು ಹಾಕುವುದಾಗಿ ಇಲಾಖೆ ತಿಳಿಸಿದೆ ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















