Tag: Karnataka News

  • ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶೆ ಸುಪ್ರಿಯಾ ನವಲೆ

    ಹಿರಿಯ ನಾಗರಿಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶೆ ಸುಪ್ರಿಯಾ ನವಲೆ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಸಮಾಜದ ಅಮೂಲ್ಯ ಆಸ್ತಿಯಾಗಿರುವ ಹಿರಿಯ ನಾಗರಿಕರ ರಕ್ಷಣೆ ಮತ್ತು ಅವರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರೂ ಪ್ರಥಮ ರ‍್ಜೆ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕರ‍್ಯರ‍್ಶಿಗಳಾದ ಶ್ರೀಮತಿ ಸುಪ್ರಿಯಾ ನವಲೆ ಅವರು ಹೇಳಿದರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ರಾಜ್ಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರ‍್ನಾಟಕ ರಾಜ್ಯ ಕಾನೂನು ಸೇವೆಗಳ…

  • ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ

    ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಮಹಾ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. “21 ರಾಜ್ಯಗಳಿಂದ ಬಂದಿರುವ ನಿಮ್ಮೆಲರನ್ನು ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ…

  • ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ದಲಿತರು ಹಾಗೂ ಬಡ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ. ನಂ. 47/74-75) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಆತಂಕಕಾರಿ…

  • ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ

    ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಬಾಲಕಿಯರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಕೆಪಿಎಸ್) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆ-ಕಾನೂನುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಶ್ರೀ ಶಿವರಾಜ್ ಕಟ್ಟಿಮನಿ ಹಾಗೂ ಶ್ರೀ ಮಲ್ಲಿಕಾರ್ಜುನ್ ಮನಗನಾಳ ಅವರು, ಬಾಲ್ಯ ವಿವಾಹ ನಿಷೇಧ…

  • ಆರಾಧನಾ ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ನೀತಿ ಹಾಗೂ ಕಾನೂನು ಅರಿವು’ ಕಾರ್ಯಕ್ರಮ

    ಆರಾಧನಾ ಶಾಲೆಯಲ್ಲಿ ‘ಮಕ್ಕಳ ರಕ್ಷಣಾ ನೀತಿ ಹಾಗೂ ಕಾನೂನು ಅರಿವು’ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಸ್ಥಳೀಯ ಆರಾಧನಾ ಪಬ್ಲಿಕ್ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ‘ಮಕ್ಕಳ ರಕ್ಷಣಾ ನೀತಿ 2016 (2023) ಹಾಗೂ ಮಕ್ಕಳ ಹಕ್ಕುಗಳು ಮತ್ತು ಕಾಯ್ದೆ-ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ’ವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಸದಸ್ಯ ಕಾರ್ಯದರ್ಶಿ ಶ್ರೀ ಮರಿಯಪ್ಪ ಅವರು, “ಮಕ್ಕಳಿಗೆ ಜೀವಿಸುವ, ರಕ್ಷಣೆಯ, ಅಭಿವೃದ್ಧಿ ಹೊಂದುವ ಹಾಗೂ ಭಾಗವಹಿಸುವ…

  • ಯಾದಗಿರಿಯಲ್ಲಿ ವಿಷಕಾರಿ ದುಬೈ ಮರಗಳ ತೆರವು ಆರಂಭ: ಜಯ ಕರ್ನಾಟಕ ಮನವಿಗೆ ಅರಣ್ಯ ಇಲಾಖೆ ಸ್ಪಂದನೆ

    ಯಾದಗಿರಿಯಲ್ಲಿ ವಿಷಕಾರಿ ದುಬೈ ಮರಗಳ ತೆರವು ಆರಂಭ: ಜಯ ಕರ್ನಾಟಕ ಮನವಿಗೆ ಅರಣ್ಯ ಇಲಾಖೆ ಸ್ಪಂದನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೌಂದರೀಕರಣ ಹೆಸರಲ್ಲಿ ಸರ್ಕಾರದ ಬೊಕ್ಕಸ ಹಾಳು ಮಾಡಿ ಮುಖ್ಯ ರಸ್ತೆ ವಿಭಜಕ ಮದ್ಯದಲ್ಲಿ ನೆಟ್ಟಿದ್ದ ವಿಷಕಾರುವ ದುಬೈ ಗಿಡಗಳನ್ನು ನೆಲಸಮ ಮಾಡುವ ಕಾರ್ಯಕ್ಕೆ ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಕಾರ್ಯಾರಂಭ ಮಾಡಿದೆ. ಇಲ್ಲಿನ ಗಂಜ್ ವೃತ್ತದಿಂದ ಗಿಡಗಳ ತೆರವು ಪ್ರಾರಂಭವಾಗಿದ್ದು, ಶೀಘ್ರ ನಗರದ ಎಲ್ಲ ದುಬೈ ವಿಷ ವೃಕ್ಷಗಳ ಕಡಿದು ಹಾಕುವುದಾಗಿ ಇಲಾಖೆ ತಿಳಿಸಿದೆ ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ…

  • ಪತ್ರಿಕೋದ್ಯಮ ಸಮಾಜದ ಕನ್ನಡಿ: ಪತ್ರಕರ್ತರ ಧ್ವನಿ ಪದಾಧಿಕಾರಿಗಳಿಗೆ ಸನ್ಮಾನ

    ಪತ್ರಿಕೋದ್ಯಮ ಸಮಾಜದ ಕನ್ನಡಿ: ಪತ್ರಕರ್ತರ ಧ್ವನಿ ಪದಾಧಿಕಾರಿಗಳಿಗೆ ಸನ್ಮಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ದಲಿತ ಸಂಘರ್ಷ ಸಮಿತಿ (ಭೀಮಮಾರ್ಗ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ನಗರದ ಹಳೆ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಇಂದೂಧರ್ ಸಿನ್ನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುದಾನ ಸಾಬ್, ಜಿಲ್ಲಾ ಖಜಾಂಜಿ ನಾಗಪ್ಪ ಮಾಲಿ ಪಾಟೀಲ್ ಹಾಗೂ ಸಂಘಟನಾ ಕಾರ್ಯದರ್ಶಿ ರೂಪೇಶ್ ಹುಲಿಕಾರ್ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಖಜಾಂಜಿ ನಾಗಪ್ಪ…

  • ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು

    ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದರು. “ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ…

  • ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

    ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಿವಕುಮಾರ್…

  • ಕಡೇಚೂರು–ಬಾಡಿಯಾಳ ವಿಷಾನಿಲ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಸಂಸದ ದೊಡ್ಡಮನಿ ಸಂತಾಪ

    ಕಡೇಚೂರು–ಬಾಡಿಯಾಳ ವಿಷಾನಿಲ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಸಂಸದ ದೊಡ್ಡಮನಿ ಸಂತಾಪ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಇಲ್ಲಿನ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಫಾರ್ಮಾ ಕಂಪನಿಯೊಂದರಲ್ಲಿ ನಿನ್ನೆ ಸಂಭವಿಸಿದ ಸಲ್ಫರ್ ಡೈಆಕ್ಸೈಡ್ ಅನಿಲ ಸೋರಿಕೆಯಿಂದಾಗಿ ಕರ್ತವ್ಯನಿರತ ಮೂವರು ಕಾರ್ಮಿಕರು ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ದುರಂತಕ್ಕೆ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಸಂಸದರು, ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕರಿಗೆ ತಕ್ಷಣವೇ ಅತ್ಯುನ್ನತ…

↑
Suddi Belaku