by
Tag: Karnataka Politics

ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಗೆ ಸಚಿವ ಸ್ಥಾನ ವಂಚಿತವಾಗಿದ್ದು ಇದನ್ನು ಸರಿದೂಗಿಸಲು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಇರುವ ಏಕೈಕ ಅವಕಾಶ ಇದ್ದು ಯಾದಗಿರಿ ಶಾಸಕರೂ ಹಿರಿಯರೂ ಅನುಭವಿಗಳು ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಚೆನ್ನಾರಡ್ಡಿ…

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪಂಚಾಯಿತಿ ಮಟ್ಟದಲ್ಲೂ ಸಮಿತಿ
ಯಾದಗಿರಿ: ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ಯಾರೊಬ್ಬರೂ ವಂಚಿತರಾಗದAತೆ ನೋಡಿಕೊಳ್ಳುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳನ್ನು ರಚಿಸಲು ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೇಣಿಕುಮಾರ ದೋಖಾ ಅವರು ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಈಗಾಗಲೇ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ…
by

ಜನಸೇವೆ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಜನಸಾಮಾನ್ಯರ ಸೇವಕರಾಗಿ, ಅವರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ಸಭಾಂಗಣದ ಮೂಲಕ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಸರ್ಕಾರದ ಅಧಿಕಾರಿ, ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜನಪ್ರತಿನಿಧಿಗಳು ಜನರ ಏಳಿಗೆಗಾಗಿ ಶ್ರಮಿಸಬೇಕು. ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗದೆ,…
by

ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರವರೆಗೆ ಪ್ರತಿವರ್ಷದ ಪದ್ದತಿಯಂತೆ ಪರಂಪರಾ ಪಾದಯಾತ್ರೆಯನ್ನು ಜನ ಕಲ್ಯಾಣ ಮತ್ತು ಲೋಕ ಕಲ್ಯಾಣಕ್ಕಾಗಿ ಕೈಗೊಳ್ಳಲಾಗುತ್ತಿದೆ ಎಂದು ಪೀಠಾಧಿಪತಿ ಡಾ ಗಂಗಾಧರ ಮಹಾಸ್ವಾಮಿಗಳು ನುಡಿದರು. ಸೋಮವಾರ ದಂದು ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಿ ಪಾದಯಾತ್ರಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಶ್ವರಾಧ್ಯರು ಜನಿಸಿದ ಈ ಗಂವ್ಹಾರ ಅತ್ಯಂತ ಪವಿತ್ರವಾದ ನೆಲವಾಗಿದೆ. ಅವರು ಕಿರಿಯ…
by

ಬಿಡದಿ ಟೌನ್ ಶಿಪ್; ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಡಿ ಕೆ ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ಪಾದಯಾತ್ರೆ ವಿತಾರವಾಗಿ ಕೇಳಿದಾಗ “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ, ಪಾದಯಾತ್ರೆ ಮಾಡುವ ಹಕ್ಕಿದೆ. ಅವರು ಏನುಬೇಕಾದರೂ ಮಾಡಲಿ. ಅಧಿವೇಶನದಲ್ಲಿ…
by

ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಾಶೀಲ ಇನ್ಸಾನ್ ಪಕ್ಷ (ವಿಐಪಿ) ಕರ್ನಾಟಕ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರ ಆದೇಶದಂತೆ, ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹಿರಿಯ ರಾಜಕೀಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ನೇಮಕದ ಬಳಿಕ ಮಾತನಾಡಿದ ಸಾಬಣ್ಣ ಬಸವಂತಪುರ, “90ರ ದಶಕದಲ್ಲಿ ಬಿಜೆಪಿ ಪಕ್ಷವನ್ನು ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಗ್ರಾಮ ಗ್ರಾಮಕ್ಕೂ ಕೊಂಡೊಯ್ದು ಸದಸ್ಯತ್ವ ಅಭಿಯಾನ ನಡೆಸಿದ್ದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೆ. ಅಂದಿನ ಅಖಂಡ…
by

Basavaraj Horatti Resigns: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ, ಸಿಎಂ ಹೇಳಿದ್ದೇನು?
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ















