by
Tag: Mallikarjuna Shivayogi

ಜಮಖಂಡಿಯಲ್ಲಿ ಮಲ್ಲಿಕಾರ್ಜುನ ಶಿವಯೋಗಿ–ಸಿದ್ಧೇಶ್ವರ ಮಹಾಸ್ವಾಮಿಗಳ ಜಯಂತ್ಯುತ್ಸವ
ಸುದ್ದಿ ಬೆಳಕು ವಾರ್ತೆ ಜಮಖಂಡಿ : ರಾಮಕೃಷ್ಣ ಪರಮಹಂಸರಿಗೆ ಸ್ವಾಮಿ ವಿವೇಕಾನಂದರು ಶಿಷ್ಯರಾಗಿದ್ದಂತೆ, ವೇದಾಂತಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳವರಿಗೆ ಜ್ಞಾನಯೋಗಿ ಸಿದ್ಧೇಶ್ವರ ಮಹಾಸ್ವಾಮಿಗಳು ಶಿಷ್ಯರಾಗಿದ್ದರು ಎಂದು ಕಾಗವಾಡ ಶಿವಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಡಾ. ಎಂ.ಬಿ. ಹೂಗಾರ ಹೇಳಿದರು. ತಾಲ್ಲೂಕಿನ ಹುಲ್ಯಾಳ ಗ್ರಾಮದ ಗುರುದೇವಾಶ್ರಮದ ಆಶ್ರಯದಲ್ಲಿ ಭಾನುವಾರ ಸಂಜೆ ನಡೆದ ವೇದಾಂತಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳವರ ಹಾಗೂ ಜ್ಞಾನಯೋಗಿ ಸಿದ್ಧೇಶ್ವರ ಮಹಾಸ್ವಾಮಿಗಳ ಜಯಂತ್ಯುತ್ಸವದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಮಹಾಸ್ವಾಮಿಗಳು ಸಮಯಕ್ಕೆ ಬಹಳ ಮಹತ್ವ…






