by
Tag: Rahul Pandwe

ಯಾದಗಿರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ರಾಮಾಯಣದ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರತ್ನಾಕರನಿಂದ ಆದಿಕವಿಯಾಗಿ ರೂಪಾಂತರಗೊಂಡ ಮಹರ್ಷಿ ವಾಲ್ಮೀಕಿ ಅವರ ಜೀವನ ಪ್ರತಿಯೊಬ್ಬರಿಗೂ ದೊಡ್ಡ ಪ್ರೇರಣೆಯಾಗಿದೆ. ರಾಮಾಯಣದ ಮೂಲಕ ಅವರು ಸಮಾಜಕ್ಕೆ ನೀಡಿರುವ ಆದರ್ಶಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ವತಿಯಿಂದ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಆಯೋಜಿಸಿದ್ದ…

ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ಅಧಿಕಾರ ಸ್ವೀಕಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ತುಕಾರಾಮ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದು,ನಿರ್ಗಮಿತ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಅಧಿಕಾರ ಹಸ್ತಾಂತರಿಸಿದರು. 2016 ನೇ ವೃಂದದ ಐಎಎಸ್ ಅಧಿಕಾರಿಗಳಾದ ಶ್ರೀ ರಾಹುಲ್ ಪಾಂಡ್ವೆ ಅವರು ಕಲ್ಬುರ್ಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶದನ್ವಯ ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅವರು ಅಧಿಕಾರ…
by







