by
Tag: Suddi Belaku News

ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನನ್ನ ಮತಕ್ಷೇತ್ರದಲ್ಲಿ ಕೈಗೊಳ್ಳುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಸರ್ಕಾರ ನಿಗಧಿಪಡಿಸಿದ ಅವಧಿಯೊಳಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ನಗರಸಭೆ ಹಿಂಭಾಗದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಸಾಮಾನ್ಯ ಯೋಜನೆಯಡಿಯಲ್ಲಿ ಲೊಕೋಪಯೊಗಿ ಇಲಾಖೆಯಿಂದ ನಗರದ ನಗರಸಭೆ ಹಿಂದುಗಡೆಯಿAದ ಡಾನ್‌ಬಾಸ್ಕೋ ಶಾಲೆಯವರೆಗೆ ೧.೨೦ ಕೋಟಿ ರೂ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾಗಿ ಆಯ್ಕೆಯಾಗಿ…

ಸಹಕಾರ ಸಂಘಗಳ ಅಭಿವೃದ್ಧಿಗೆ ತರಬೇತಿ ಅಗತ್ಯ: ಶಾಂತಗೌಡ ಮಾಲಿ ಪಾಟೀಲ್
ಸುದ್ದಿ ಬೆಳಕು ವಾರ್ತೆ ಶಹಾಪುರ: ಸಹಕಾರ ಸಂಘಗಳಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಸಹಕಾರ ಸಂಘಗಳನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಜೊತೆಗೆ ಇಂತಹ ತರಬೇತಿ ಪಡೆಯುವುದರಿಂದ ಸಹಕಾರ ಸಂಘಗಳನ್ನು ಬಲಪಡಿಸಲು ಸಾಧ್ಯವೆಂದು ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳದ ನಿರ್ದೇಶಕರು ಹಾಗೂ ಸಂಘದ ನಿರ್ದೇಶಕರಾದ ಶಾಂತಗೌಡ ಮಾಲಿ ಪಾಟೀಲ್ ನಾಗನಟಗಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ, ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಹಾಗೂ ಪ್ರಾಥಮಿಕ ಕೃಷಿ…
by

ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನ ಕತ್ತಲೆಯಿಂದ ಬೆಳಕಿನಡೆಗೆ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರ ಹಾಗೂ ಗೌರವಯುತವಾದ ವೃತ್ತಿಯಾಗಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ್ ಹೇಳಿದರು. ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶ್ರೀಮತಿ ಹನುಮಂತಿ ಯಲ್ಲಪ್ಪ ಮಾಳಿಕೇರಿ, ಮುಖ್ಯಗುರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾನಳ್ಳಿ ಅವರ ವಯೋನಿವೃತ್ತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ.…
by

ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ: ಶ್ರೀ ರಂಭಾಪುರಿ ಜಗದ್ಗುರುಗಳ ಸಂದೇಶ
ಸುದ್ದಿ ಬೆಳಕು ವಾರ್ತೆ ಹುನಗುಂದ : ಮಾನವನ ಬದುಕು ಭಗವಂತನ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು ಅರಿತು ಸತ್ಕಾರ್ಯಗಳ ಮೂಲಕ ಸಾರ್ಥಕಗೊಳಿಸಿದಾಗ ಬದುಕು ಬಂಗಾರವಾಗುತ್ತದೆ. ನಿರಂತರ ಪರಿಶ್ರಮ, ದೃಢ ಸಂಕಲ್ಪ ಮತ್ತು ಸಾಧನೆಯ ಛಲವೇ ಶ್ರೇಯಸ್ಸಿನ ಮೂಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ತಾಲೂಕಿನ ಹಾವರಗಿ ಗ್ರಾಮದ ಎಸ್.ಎಂ.ಎಸ್. ಪ್ರೌಢಶಾಲೆ ಆವರಣದಲ್ಲಿ ಭಾನುವಾರ ನಡೆದ ಮಾಜಿ ಸಚಿವ ದಿವಂಗತ ಎಸ್.ಆರ್. ಕಾಶಪ್ಪನವರ 24ನೇ ವರ್ಷದ ಪುಣ್ಯಸ್ಮರಣೋತ್ಸವ ಹಾಗೂ ಧರ್ಮ…
by

ಶುದ್ಧ ಕುಡಿಯುವ ನೀರಿಗೂ ಪರದಾಟ; ನಾಲ್ವದಡಗಿ ತಾಂಡಾದಲ್ಲಿ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ನಾಲ್ವದಡಗಿ ತಾಂಡಾದಲ್ಲಿ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದ ನಿವಾಸಿಗಳು ಕಲುಷಿತ ನೀರಿನ ಮಧ್ಯೆಯೇ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದರು. ಭಾನುವಾರ ಬೆಳಿಗ್ಗೆ ತಾಂಡಕ್ಕೆ ದಿಢೀರ್ ಭೇಟಿ ನೀಡಿ ಕಾಲ್ನಡಿಗೆಯಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ದೊರೆತು 78 ವರ್ಷಗಳಾದರೂ ತಾಂಡಾ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಚರಂಡಿ ನೀರಿನಲ್ಲಿ…
by

ಯಾದಗಿರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು; 100% ಎಣಿಕೆ ನಮೂನೆ ವಿತರಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆರಂಭವಾಗಿದ್ದು, ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಮನೆ-ಮನೆಗೆ ಭೇಟಿ ನೀಡುವ ಬಿಎಲ್‍ಒ.ಗಳ ಕಾರ್ಯವು ಜಿಲ್ಲೆಯಲ್ಲಿ ಚುರುಕಿನಿಂದ ಸಾಗುತ್ತಿದೆ. ಮತದಾರರಿಗೆ ಎಣಿಕೆ ನಮೂನೆ (Enumeration Form – EF) ವಿತರಿಸುವ ಸಲುವಾಗಿ ಬಿಎಲ್‍ಒಗಳು ಕಳೆದ ಜೂನ್ 30 ರಿಂದಲೇ ಮನೆ-ಮನೆ ಭೇಟಿಯನ್ನು ಆರಂಭಿಸಿದ್ದಾರೆ. ಈ ಪ್ರಕ್ರಿಯೆಯು ಜುಲೈ 29 ರವರೆಗೆ ಮುಂದುವರಿಯಲಿದ್ದು, ಎಣಿಕೆ ನಮೂನೆ ನೀಡುವುದು ಹಾಗೂ ಡಿಜಿಟೈಸೇಷನ್ ಕಾರ್ಯಗಳು ಪ್ರಗತಿಯಲ್ಲಿವೆ. ಜೂನ್ 16 ರ…
by

ಭೀಮಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು: ಕುಟುಂಬಕ್ಕೆ ಶಾಸಕ ತುನ್ನೂರ್ ಸಾಂತ್ವನ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ತಳಕ ಗ್ರಾಮದ ಮೀನುಗಾರ ಹಣಮಂತ ಚಂದಪ್ಪ ಸಗರ ಅವರು ಇತ್ತೀಚೆಗೆ ಭೀಮಾ ನದಿಯಲ್ಲಿ ಬಿದ್ದು ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ, ಯಾದಗಿರಿ ಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿರುವ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಶಾಸಕರು, ಹಣಮಂತ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಮೀನುಗಾರಿಕೆಗೆ ತೆರಳಿದ್ದಾಗ ಸಂಭವಿಸಿದ ಈ ದುರ್ಘಟನೆ ನಿಜಕ್ಕೂ ಬೇಸರ…
by

ಮಳೆಗಾಗಿ ಮೈಲಾರಲಿಂಗೇಶ್ವರನ ಮೊರೆ ಹೋದ ರಾಮಸಮುದ್ರ ಗ್ರಾಮಸ್ಥರು: ಭಜನೆ ಮಾಡುತ್ತಾ ಪಾದಯಾತ್ರೆ
ಮೈಲಾಪುರದ ದೇಗುಲದಲ್ಲಿ ವಿಶೇಷ ಪೂಜೆ | ಅನ್ನದಾತರ ಬದುಕು ಹಸನಾಗಲಿ ಎಂದು ವರುಣನಲ್ಲಿ ಪ್ರಾರ್ಥನೆ ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಮಳೆಗಾಗಿ ಕಾದು ಕುಳಿತಿರುವ ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮಸ್ಥರು ವರುಣನ ಕೃಪೆಗಾಗಿ ಮೈಲಾಪುರದ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭಜನೆ ಮಾಡುತ್ತಾ ಪಾದಯಾತ್ರೆ ನಡೆಸಿದರು. ಮಳೆಗಾಗಿ ಪ್ರಾರ್ಥಿಸಿ ಗ್ರಾಮದಿಂದ ಕಾಲ್ನಡಿಗೆಯಲ್ಲಿ ಹೊರಟ ನೂರಾರು ಭಕ್ತರ ತಂಡವು, ದಾರಿಯುದ್ದಕ್ಕೂ ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಮಾಡುತ್ತಾ ಮೈಲಾಪುರದ ದೇಗುಲವನ್ನು ತಲುಪಿತು. ದೇವಾಲಯದ ಆವರಣದಲ್ಲಿ ಮಳೆಗಾಗಿ ವಿಶೇಷ ಭಜನೆ…
by

ಗ್ಯಾರಂಟಿ ಯೋಜನೆ ನಿಲ್ಲಿಸಿ, ರೈತರ ಸಾಲ ಮನ್ನಾ ಮಾಡಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಶಾಸಕ ಕಂದಕೂರು ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ವರ್ಷ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ರೈತರ ಸಾಲ ಮನ್ನಾ ಮಾಡಬೇಕು ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಒತ್ತಾಯಿಸಿದ್ದಾರೆ. ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರೈತರ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ರೈತರ ಆತ್ಮಹತ್ಯೆ ತಡೆಯಲು ಸಾಲ ಮನ್ನಾ ಅನಿವಾರ್ಯ “ರಾಜ್ಯದಲ್ಲಿ ಮಳೆಯಿಲ್ಲ, ಬೆಳೆಯಿಲ್ಲ.…
by

ಹತ್ತಿ ಬೆಳೆ ನಷ್ಟಕ್ಕೆ ಚಟ್ನಳ್ಳಿ ರೈತ ಆತ್ಮಹತ್ಯೆ, ತಕ್ಷಣ ಪರಿಹಾರ ನೀಡಿ : ರಾಚನಗೌಡ ಮುದ್ನಾಳ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆ ಕೊರತೆಯಿಂದ ಹತ್ತಿ ಬೆಳೆ ನಷ್ಟವಾದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದ ರೈತ ಮಲ್ಲಿಕಾರ್ಜುನ (38) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. 8 ಎಕರೆ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ಕೃಷಿ ಮಾಡುತ್ತಿದ್ದ ಮಲ್ಲಿಕಾರ್ಜುನ ಅವರು ಈ ಋತುವಿನಲ್ಲಿ ಹತ್ತಿ ಬೀಜವನ್ನು ಎರಡು ಬಾರಿ ಬಿತ್ತನೆ ಮಾಡಿದ್ದರು. ಮಳೆ ಬಾರದೇ ಬೆಳೆ ಒಣಗಿದ ಕಾರಣ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಮೃತ ರೈತ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















