Tag: Suddi Belaku News

  • ಭೀಮರಾಯನಗುಡಿ ಕೃಷಿ ವಿದ್ಯಾರ್ಥಿಗಳಿಂದ ಭತ್ತ ನಾಟಿ ಪ್ರಾಯೋಗಿಕ ತರಬೇತಿ

    ಭೀಮರಾಯನಗುಡಿ ಕೃಷಿ ವಿದ್ಯಾರ್ಥಿಗಳಿಂದ ಭತ್ತ ನಾಟಿ ಪ್ರಾಯೋಗಿಕ ತರಬೇತಿ

    ಸುದ್ದಿ ಬೆಳಕು ವಾರ್ತೆ ​ಶಹಾಪುರ : ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದ ಗ್ರಾಮೀಣ ಕೃಷಿ ಅನುಭವ ಕಾರ್ಯಕ್ರಮದ (RAWE – Rural Agricultural Work Experience) ಭಾಗವಾಗಿ, ಮಲ್ಲನಗೌಡರ ಹೊಲದಲ್ಲಿ ಇತ್ತೀಚೆಗೆ ಭತ್ತ ನಾಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ​ಕಾರ್ಯಕ್ರಮದಲ್ಲಿ ‘ರಾವೆ’ ಯೋಜನೆಯ ಕೃಷಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ಹೊಲದಲ್ಲಿ ಭತ್ತದ ಸಸಿಗಳನ್ನು ನಾಟಿ ಮಾಡಿದರು. ಈ ವೇಳೆ ವಿದ್ಯಾರ್ಥಿಗಳಿಗೆ ಭತ್ತ ನಾಟಿಯ ವೈಜ್ಞಾನಿಕ ವಿಧಾನಗಳು, ಸಸಿಗಳ ನಡುವೆ ಇಡಬೇಕಾದ ಸೂಕ್ತ ಅಂತರ, ನಾಟಿಯ ಆಳ ಹಾಗೂ…

  • ಭಾರತದ ಮೊದಲ ಕ್ವಾಂಟಮ್ ಸಿಟಿ ಹೆಸರಘಟ್ಟದಲ್ಲಿ ನಿರ್ಮಾಣ : ಡಿ ಕೆ ಶಿವಕುಮಾರ್ ಘೋಷಣೆ

    ಭಾರತದ ಮೊದಲ ಕ್ವಾಂಟಮ್ ಸಿಟಿ ಹೆಸರಘಟ್ಟದಲ್ಲಿ ನಿರ್ಮಾಣ : ಡಿ ಕೆ ಶಿವಕುಮಾರ್ ಘೋಷಣೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಕರ್ನಾಟಕ ಕ್ವಾಂಟಮ್ ಮಿಷನ್ ಬೆಂಬಲದೊಂದಿಗೆ ಬೆಂಗಳೂರು ಈಗಾಗಲೇ ನವೋದ್ಯಮ ಮತ್ತು ಜಾಗತಿಕ ತಂತ್ರಜ್ಞಾನ ಕಂಪನಿಗಳ ಬೆಳವಣಿಗೆಗೆ ಪೂರಕ ಪರಿಸರ ವ್ಯವಸ್ಥೆಯನ್ನು ಹೊಂದಿದ್ದು, ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣ ಮಾಡಲಾಗುತ್ತಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ಶುಕ್ರವಾರ ನಡೆದ ‘ಕ್ವಾಂಟಮ್’ ಪ್ರದರ್ಶನ ಉದ್ಘಾಟಿಸಿ ಶಿವಕುಮಾರ್ ಅವರು ಮಾತನಾಡಿದರು. “ಕ್ವಾಂಟಮ್ ಸಿಟಿಯು ಸಂಶೋಧನಾ ಪ್ರಯೋಗಾಲಯಗಳ ಪರಿಸರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಲಿದೆ. ಈ ಕ್ಷೇತ್ರದ…

  • ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು

    ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಗುರುಮಠಕಲ್ ತಾಲೂಕಿನ ಕಡೆಚೂರು -ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೇ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸತೀಶಕುಮಾರ ಎಂಬುವವರು ಸೈದಾಪುರ ಪೊಲೀಸ್ ಠಾಣೆಯಲ್ಲಿ ಸಿಲ್ ಕೆಮಿಕಲ್ ಕಂಪನಿ ವಿರುದ್ದ ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.ಕಂಪನಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಪಟ್ಟ ಮೇಲೆ ಕಾನೂನಿನ ಕ್ರಮ ಜರುಗಿಸುವಂತೇ…

  • ಯಾದಗಿರಿ: ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅನಿಲ ಸೋರಿಕೆ ಶಂಕೆ, ಕಾರ್ಮಿಕ ಅಸ್ವಸ್ಥ

    ಯಾದಗಿರಿ: ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅನಿಲ ಸೋರಿಕೆ ಶಂಕೆ, ಕಾರ್ಮಿಕ ಅಸ್ವಸ್ಥ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೆ ಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಅನೀಲ ಸೋರಿಕೆಯಿಂದ ಮೂವರು ಬಡ ಕಾರ್ಮಿಕರ ಮೃತಪಟ್ಟಿರುವ ನೋವು ತಣ್ಣಗಾಗುವ ಮುನ್ನವೇ ಗುರುವಾರ ಸಂಜೆ ಮತ್ತೊಂದು ಅವಘಡ ಸಂಭವಿಸಿದೆ. ರಾಮಿಸ್ ಕೆಮಿಕಲ್ ಕಂಪನಿಯಲ್ಲಿ ರಾಸಾಯನಿಕ ವಸ್ತುಗಳನ್ನು ಅಪ್ಲೋಡ್ ಮಾಡುವ ವೇಳೆ ಅಯಾನ್ ಸಂಶೋದ್ದಿನ್ ಹುಮನಾಬಾದ (21) ಎಂಬ ಕಾರ್ಮಿಕ ಗಂಭೀರವಾಗಿ ಅಸ್ವಸ್ಥಗೊಂಡು ಉಸಿರಾಟದ ತೊಂದರೆ ಅನುಭವಿಸಿದ್ದಾನೆ. ಕೂಡಲೇ ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಆತನನ್ನು ಕಳುಹಿಸಲಾಗಿದೆ.…

  • ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ನಿಧಿ ಬಳಸಿ: ಐಟಿ ಕಂಪನಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಕರೆ

    ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ನಿಧಿ ಬಳಸಿ: ಐಟಿ ಕಂಪನಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಕರೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಅತ್ಯುತ್ತಮ ಶಿಕ್ಷಣ ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಉದ್ಯಮಗಳು ಸಿಎಸ್‌ಆರ್ ನಿಧಿಯ ಮೂಲಕ ಕೈಜೋಡಿಸುವುದು ಅತ್ಯಗತ್ಯ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದರು. ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಐಟಿ ಕಂಪನಿಗಳು ಮತ್ತು ಕೈಗಾರಿಕೆಗಳ ಸಂಘದ (G BITCIA) ‘ವಿಷನ್ 2030 – ಸಿ.ಎಸ್.ಆರ್. ಸಮಾವೇಶ-2026’ ರಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಿಎಸ್‌ಆರ್ (CSR)…

  • ಪರಿಷ್ಕೃತ ಕನಿಷ್ಠ ವೇತನ ತಡೆಗೆ ಎಐಯುಟಿಯುಸಿ ವಿರೋಧ: ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ

    ಪರಿಷ್ಕೃತ ಕನಿಷ್ಠ ವೇತನ ತಡೆಗೆ ಎಐಯುಟಿಯುಸಿ ವಿರೋಧ: ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮೇ 22, 2026ರಿಂದ ರಾಜ್ಯಾದ್ಯಂತ ಜಾರಿಗೆ ಬಂದಿರುವ ಪರಿಷ್ಕೃತ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಅಮಾನತಿನಲ್ಲಿಡುವ ಯಾವುದೇ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಕ್ಷಣವೇ ತಿರಸ್ಕರಿಸಬೇಕು ಹಾಗೂ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಪರಿಷ್ಕೃತ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ‘ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್’ (ಎಐಯುಟಿಯುಸಿ) ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ…

  • ಕಡೇಚೂರು ಕೈಗಾರಿಕಾ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡಿ, ನಿರ್ಲಕ್ಷ್ಯ ಕಂಪನಿ ಬಂದ್ ಮಾಡಿ – ಡಾ. ಉಮೇಶ್ ಜಾಧವ್

    ಕಡೇಚೂರು ಕೈಗಾರಿಕಾ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡಿ, ನಿರ್ಲಕ್ಷ್ಯ ಕಂಪನಿ ಬಂದ್ ಮಾಡಿ – ಡಾ. ಉಮೇಶ್ ಜಾಧವ್

    ಸುದ್ದಿ ಬೆಳಕು ವಾರ್ತೆ ಸೈದಾಪುರ: ಇತ್ತೀಚೆಗೆ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಅನೀಲ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ ತಿಳಿಸಿದ್ದಾರೆ. ಶುಕ್ರವಾರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಹಲವು ರಾಸಾಯನಿಕ ಕಂಪನಿಗಳಲ್ಲಿ ಕಾರ್ಮಿಕರ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ. ಅದರ ಪರಿಣಾಮ ಅಮಾಯಕ ಕಾರ್ಮಿಕರು ಪ್ರಾಣ ಕಳೆದುಕೊಳ್ಳುವಂತಹ ದುರ್ಘಟನೆಗಳು ಮರುಕಳಿಸುತ್ತಿವೆ ಎಂದು ಕಳವಳ…

  • ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಮತ ಕ್ಷೇತ್ರದ ಕಾಂಗ್ರೆಸ್ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಮಹತ್ತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿರುವ ಕ್ಷೇತ್ರದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಎ.ಸಿ. ಕಾಡ್ಲೂರು ಅವರಿಗೆ ವಿಧಾನ ಪರಿಷತ್ (ಎಂ.ಎಲ್.ಸಿ.) ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಕಾಂಗ್ರೆಸ್ ಸರಕಾರಕ್ಕೆ ಕಾಂಗ್ರೆಸ್ ಶಹಪುರ್ ತಾಲೂಕು ಯುವ ಘಟಕದ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಹೆಚ್. ಬಿ.ನಾಯಕ್ ವನದುರ್ಗ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಶುಕ್ರವಾರ ಹೇಳಿಕೆ…

  • Basavaraj Horatti Resigns: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ, ಸಿಎಂ ಹೇಳಿದ್ದೇನು?

    Basavaraj Horatti Resigns: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ, ಸಿಎಂ ಹೇಳಿದ್ದೇನು?

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜಿನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು…

  • ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ

    ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಮಹಾ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. “21 ರಾಜ್ಯಗಳಿಂದ ಬಂದಿರುವ ನಿಮ್ಮೆಲರನ್ನು ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ…

↑
Suddi Belaku