by
Tag: Suddi Belaku News

ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು: ಗುರುಮಠಕಲ್‌ನಲ್ಲಿ ಮಕ್ಕಳ ಹಕ್ಕುಗಳ ಅರಿವು
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ (ಯಾದಗಿರಿ): ಇಲ್ಲಿನ ವಿದ್ಯಾಜ್ಯೋತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಾಗಿ ಮಕ್ಕಳ ಹಕ್ಕುಗಳು ಮತ್ತು ಸಂಬಂಧಿತ ಕಾಯ್ದೆ-ಕಾನೂನುಗಳ ಕುರಿತು ಜಾಗೃತಿ ಹಾಗೂ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಕುಮಾರಿ ಮಂಜಮ್ಮ, “ಬಾಲಕಾರ್ಮಿಕ ನಿಷೇಧ ಕಾಯ್ದೆ-೧೯೮೬ ರ ಪ್ರಕಾರ ೬ ರಿಂದ ೧೮ ವರ್ಷದೊಳಗಿನ ಪ್ರತಿಯೊಂದು ಮಗುವೂ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಮಕ್ಕಳು ಶಾಲೆಯನ್ನು ಬಿಟ್ಟು ಕೂಲಿ ಕೆಲಸಕ್ಕೆ…

ಮಕ್ಕಳ ಹಕ್ಕುಗಳ ಸಂರಕ್ಷಣೆ ಸಮಾಜದ ಹೊಣೆ: ಶಹಾಪುರದಲ್ಲಿ ಜಾಗೃತಿ ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ಶಹಾಪುರ: ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದಂತೆ, ಶಹಾಪುರ ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗಾಗಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕರಾದ ಶ್ರೀ ದೇವಪ್ಪ ಗಿರಿಗಿರಿ ಅವರು ಮಕ್ಕಳ ಮೂಲಭೂತ ಹಕ್ಕುಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಪ್ರತಿಯೊಬ್ಬ ಮಗುವಿಗೂ ಬದುಕುವ ಹಕ್ಕು, ರಕ್ಷಣೆ ಪಡೆಯುವ…
by

ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ವಡಗೇರದಲ್ಲಿ ಅರಿವು ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ವಡಗೇರ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಿರ್ದೇಶನದಂತೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಅಜೀಂ ಪ್ರೇಮ್‌ಜಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ಪರ್ವತರೆಡ್ಡಿ (ಎಸ್‌ಐ), ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತರು, ಮಕ್ಕಳ ಹಕ್ಕುಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮಕ್ಕಳನ್ನು ಪ್ರೀತಿ ಮತ್ತು ಕಾಳಜಿಯಿಂದ ಬೆಳೆಸುವುದು ಪೋಷಕರ…
by

ರೈತರಿಗೆ ನ್ಯಾಯ ಕೊಡಿಸುವಂತಹ ಹೋರಾಟ ನಿಮ್ಮ ಸಂಘಟನೆಯಿಂದ ಮಾಡಿ : ಮುದ್ನಾಳ
ಯಾದಗಿರಿ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಸೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿರುವ ರೈತರಿಗೆ ಮಳೆ ಕೈಕೊಟ್ಟಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಚಾಟಿ ಬೀಸುವಂತಹ ಹೋರಾಟ ರೂಪಿಸಿ, ರೈತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಘಟನೆಗಳು ಮಾಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಕಚೇರಿ ಉದ್ಘಾಟಿಸಿ…
by

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರಿಗೆ ಆದ್ಯತೆ: ಅಧಿಕಾರಿಗಳಿಗೆ ಶಾಸಕ ತುನ್ನೂರ ಖಡಕ್ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆಗಾಲ ಆರಂಭಗೊಂಡಿದ್ದರಿಂದ ಮತಕ್ಷೇತ್ರದ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ನಡೆದ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಡಗೇರಾ, ಶಹಾಪುರ ಮತ್ತು ಯಾದಗಿರಿ ತಾಲೂಕುಗಳ ನೂರಾರು ಹಳ್ಳಿ ಮತ್ತು ತಾಂಡಾಗಳು ತಮ್ಮ ಮತ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತಿದ್ದು, ಬೊರವೆಲ್‌ಗಳ ಸ್ಥಿತಿಗತಿಗಳ ಮತ್ತು ದುರಸ್ತಿ, ಆರ್‌ಒ…
by

ಕಾಮನ್‌ವೆಲ್ತ್ ಗೇಮ್ಸ್ 2026: 39 ಪದಕಗಳೊಂದಿಗೆ 4ನೇ ಸ್ಥಾನ ಪಡೆದ ಭಾರತ! ಇಲ್ಲಿದೆ ಸಂಪೂರ್ಣ ವಿಜೇತರ ಪಟ್ಟಿ
ಸುದ್ದಿ ಬೆಳಕು ವಾರ್ತೆ ಗ್ಲಾಸ್ಗೋದಲ್ಲಿ ಮುಕ್ತಾಯಗೊಂಡ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದು, 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳೊಂದಿಗೆ ಒಟ್ಟು 39 ಪದಕಗಳನ್ನು ಮುಡಿಗೇರಿಸಿಕೊಂಡು ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿದ್ದಾರೆ. ಕುಸ್ತಿ, ಬ್ಯಾಡ್ಮಿಂಟನ್, ಶೂಟಿಂಗ್ ಮತ್ತು ಹಾಕಿಯಂತಹ ಪ್ರಮುಖ ಕ್ರೀಡೆಗಳು ಈ ಬಾರಿಯ ಕೂಟದಲ್ಲಿ ಇಲ್ಲದಿದ್ದರೂ, ಭಾರತೀಯ ಕ್ರೀಡಾಪಟುಗಳು ಬಾಕ್ಸಿಂಗ್, ಅಥ್ಲೆಟಿಕ್ಸ್, ವೇಟ್‌ಲಿಫ್ಟಿಂಗ್ ಮತ್ತು ಜೂಡೋದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಒಟ್ಟು 171 ಪದಕಗಳೊಂದಿಗೆ ಆಸ್ಟ್ರೇಲಿಯಾ…
by

ಭಾರತೀಯ ತತ್ವಶಾಸ್ತ್ರಕ್ಕೆ ಉಪನಿಷತ್ತುಗಳ ಕೊಡುಗೆ ಅಪಾರ: ದೇವರಾಜ ಕುಲಕರ್ಣಿ
ಸುದ್ದಿ ಬೆಳಕು ವಾರ್ತೆ ಹುಣಸಗಿ : ಭಾರತೀಯ ತತ್ವಶಾಸ್ತ್ರಕ್ಕೆ ಉಪನಿಷತ್ತು ಕೊಡುಗೆ ಅಪಾರ ಎಂದು ಬಲಶೆಟ್ಟಿಹಾಳ ಶಿಕ್ಷಕ ದೇವರಾಜ ಕುಲಕರ್ಣಿ ಹೇಳಿದರು. ಹುಣಸಗಿ ತಾಲೂಕು ವಿಕ್ರಮಪುರ ಓದುಗರ ಬಳಗದ ವತಿಯಿಂದ ಶಾಖಾ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಓದುಗರ ಭೇಟಿ-4 ನೇ ಕಾರ್ಯಕ್ರಮದಲ್ಲಿ ನಚಿಕೇತ- ಯಮನ ಸಂವಾದ ಕುರಿತು ಮಾತನಾಡಿದರು. ಭಾರತೀಯ ತತ್ವಶಾಸ್ತ್ರದ ಅತ್ಯಂತ ಪ್ರಸಿದ್ಧ ಸಂವಾದಗಳಲ್ಲಿ ಕಠೋಪನಿಷತ್ತಿನ ಯಮ- ನಚಿಕೇತರ ಸಂವಾದ ಒಂದಾಗಿದೆ. ಮರಣದ ನಂತರ ಏನಾಗುತ್ತದೆ ಎಂದು ಕೇಳಿದ ನಚಿಕೇತನ ಪ್ರಶ್ನೆಗೆ ಯಮಧರ್ಮನು, ಆತ್ಮದ ಅಮರತ್ವ, ಧರ್ಮ, ಮೋಕ್ಷ ಮತ್ತು ಸತ್ಯಜೀವನದ ಮಹತ್ವವನ್ನು…
by

ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಮುಖ್ಯ: ಶಾಸಕ ಚನ್ನಾರೆಡ್ಡಿ ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜನರ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರು ಸಮಾಜದ ಸ್ವಾಸ್ಥ ಕಾಪಾಡುವುದರೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪದಗ್ರಹಣ, ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಸಸಿಗೆ ನೀರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಈ ವ್ಯವಸ್ಥೆಯಲ್ಲಿ ನಾಲ್ಕನೆ ಅಂಗವಾಗಿ ಸಮರ್ಥವಾಗಿ…
by

ಸಿವಿಲ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ: ಯಾದಗಿರಿಯ 19 ಕೇಂದ್ರಗಳಲ್ಲಿ ಬಿಗಿ ಭದ್ರತೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯಾದ್ಯಂತ ಇಂದು ನಡೆಯುತ್ತಿರುವ ಸಿವಿಲ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾದಗಿರಿ ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಪರೀಕ್ಷೆ ಆರಂಭವಾಗಿದ್ದು, ಯಾವುದೇ ಅಕ್ರಮ ಅಥವಾ ಗೊಂದಲಕ್ಕೆ ಅವಕಾಶವಾಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ವಿಶೇಷ ಮುನ್ನೆಚ್ಚರಿಕೆ ವಹಿಸಿದೆ. ಬೆಳಗ್ಗೆಯಿಂದಲೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದು, ಪ್ರತಿಯೊಬ್ಬ ಅಭ್ಯರ್ಥಿಯನ್ನು ಮೆಟಲ್ ಡಿಟೆಕ್ಟರ್…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















