Tag: Suddi Belaku

  • ಗುರುಮಠಕಲ್‌ಗೆ ಜಿಲ್ಲಾಧಿಕಾರಿ ಭೇಟಿ: ಅಧಿಕಾರಿಗಳ ಸಭೆ, ಸಾರ್ವಜನಿಕ ಸಮಸ್ಯೆಗಳ ಪರಿಶೀಲನೆ

    ಗುರುಮಠಕಲ್‌ಗೆ ಜಿಲ್ಲಾಧಿಕಾರಿ ಭೇಟಿ: ಅಧಿಕಾರಿಗಳ ಸಭೆ, ಸಾರ್ವಜನಿಕ ಸಮಸ್ಯೆಗಳ ಪರಿಶೀಲನೆ

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್‌ : ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಗುರುಮಠಕಲ್‌ಗೆ ಭೇಟಿ ನೀಡಿ, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಪಟ್ಟಣದ ತಹಶಿಲ್ದಾರರ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ, ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ…

  • ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ

    ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ

    ಯಾದಗಿರಿ : ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಯಾದಗಿರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವವನ್ನು ಗೌರವಪೂರ್ವಕವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮರುಳಾಸಿದ್ದಾರಾಧ್ಯ ಹೆಚ್.ಜೆ. ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸಿದರು. ಮಾತನಾಡಿದ ಅವರು, ಸ್ವಾತಂತ್ರ್ಯವೆಂದರೆ ಕೇವಲ ಪರಕೀಯ ಆಡಳಿತದಿಂದ ಮುಕ್ತಿಯಾಗುವುದಲ್ಲ. ಸಂವಿಧಾನದ ಆಶಯಗಳನ್ನು ಗೌರವಿಸಿ, ಕಾನೂನಿನ ಚೌಕಟ್ಟಿನಲ್ಲಿ ತಮ್ಮ ಕರ್ತವ್ಯ…

  • ನೂತನ ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಯರಗೋಳಗೆ ಬಿಜೆಪಿ ವತಿಯಿಂದ ಸನ್ಮಾನ

    ನೂತನ ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಯರಗೋಳಗೆ ಬಿಜೆಪಿ ವತಿಯಿಂದ ಸನ್ಮಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲಾ ನ್ಯಾಯಾಲಯದ 2026-27ನೇ ಸಾಲಿನ ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾದ ನ್ಯಾಯವಾದಿ ದೇವಿಂದ್ರಪ್ಪ ಯರಗೋಳ ಅವರನ್ನು ಯಾದಗಿರಿ ಜಿಲ್ಲಾ ಬಿಜೆಪಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ ಅವರು ದೇವಿಂದ್ರಪ್ಪ ಯರಗೋಳ ಅವರನ್ನು ಸನ್ಮಾನಿಸಿ, ನೂತನ ಜವಾಬ್ದಾರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ…

  • ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್

    ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಪಾಡುವುದು ನನ್ನ ಕರ್ತವ್ಯ: ಸಿಎಂ ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಮಡಿಕೇರಿ : “ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕು. ಎರಡೂ ಬಹಳ ಮುಖ್ಯ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ನನ್ನ ಕರ್ತವ್ಯ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಕುಡಿಯುವ ನೀರು, ಕೃಷಿಗೆ ಜಲಾಶಯಗಳಲ್ಲಿನ ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡೇ ನಾವು ನಿರ್ಧಾರ ಕೈಗೊಳ್ಳಬೇಕು.‌ ಉತ್ತಮ ಮಳೆಯಾಗಿ ಬೆಳೆ…

  • ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣದಿಂದ ಜಾನುವಾರುಗಳ ಚಿಕಿತ್ಸೆಗೆ ಅನುಕೂಲ : ಶಾಸಕ ತುನ್ನೂರ

    ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣದಿಂದ ಜಾನುವಾರುಗಳ ಚಿಕಿತ್ಸೆಗೆ ಅನುಕೂಲ : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ದೇಶ ಕೃಷಿ ಪ್ರಧಾನವಾಗಿದೆ, ಗ್ರಾಮೀಣ ಭಾಗದ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯನ್ನೆ ಅವಲಂಭಿಸಿ ಜೀವನ ಸಾಗಿಸುತ್ತಿದ್ದಾರೆ, ರೈತರಿಗೆ ಆತನ ಜಾನುವಾರುಗಳು ಆಧಾರಸ್ಥಂಭವಾಗಿವೆ, ಅವುಗಳಿಗೆ ಹಲವಾರು ಸಮಯದಲ್ಲಿ ರೋಗಗಳು ಬರುವುದು ಸ್ವಾಭಾವಿಕ, ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣ ಮಾಡಿರುವುದರಿಂದ ಪಶು ವೈಧ್ಯರಿಗೆ ಹಾಗೂ ಸಿಬ್ಬಂಧಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ತಾಲ್ಲೂಕಿನ ರಾಮಸಮುದ್ರ ಗ್ರಾಮದಲ್ಲಿ ೪೯ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ…

  • ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ: ಸ್ವಾತಂತ್ರ್ಯ ದಿನದಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. 80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸದಾಶಿವನಗರ ನಿವಾಸದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾಡಿನ ಹಾಗೂ ದೇಶದ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನದ ಹೃದಯಪೂರ್ವಕ…

  • ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

    ಯಾದಗಿರಿ: ಪೂರ್ವಿಕರ ತ್ಯಾಗದ ಪ್ರತೀಕವೇ ಸ್ವಾತಂತ್ರ್ಯ ದಿನ: ಬಿ.ಎನ್. ವಿಶ್ವನಾಥ್ ನಾಯಕ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : “1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ದೇಶಕ್ಕೆ ಮುಕ್ತಿ ದೊರೆಯುವವರೆಗೂ ನಡೆದ ದೀರ್ಘ ಹೋರಾಟಗಳು, ಬ್ರಿಟಿಷರ ದಬ್ಬಾಳಿಕೆ-ಹಿಂಸೆಗಳ ನಡುವೆ ನಮ್ಮ ಪೂರ್ವಿಕರು ಮತ್ತು ಮಹಾನ್ ದೇಶಭಕ್ತರು ನೀಡಿದ ರಕ್ತ ಬಲಿದಾನದ ಸಾರ್ಥಕ ಸಂಕೇತವೇ ಇಂದಿನ ಸ್ವಾತಂತ್ರ್ಯ ದಿನ,” ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ್ ನಾಯಕ್ ಅಭಿಪ್ರಾಯಪಟ್ಟರು. ಭಾರತದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಗರದ ಸರ್ಕಾರಿ ಪದವಿ ಕಾಲೇಜು ರಸ್ತೆಯಲ್ಲಿರುವ ಜಯ ಕರ್ನಾಟಕ ಜಿಲ್ಲಾ ಕಚೇರಿಯಲ್ಲಿ ಶನಿವಾರ…

  • ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ

    ರಾಷ್ಟ್ರದ ಏಕತೆ, ಅಖಂಡತೆಗೆ ಬದ್ಧರಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ವಿಭೂತಿಹಳ್ಳಿ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: “ಮಹನೀಯರ ತ್ಯಾಗ ಮತ್ತು ಬಲಿದಾನಗಳಿಂದ ಲಭಿಸಿರುವ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು, ದೇಶದ ಏಕತೆ ಹಾಗೂ ಅಖಂಡತೆಗೆ ನಾವೆಲ್ಲರೂ ಸದಾ ಬದ್ಧರಾಗಿರಬೇಕು,” ಎಂದು ಬಿಜೆಪಿ ಯಾದಗಿರಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ ಕರೆ ನೀಡಿದರು. ಭಾರತದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. “ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೊಲ್ಲೂರು ಮಲ್ಲಪ್ಪ, ವಿಶ್ವನಾಥರೆಡ್ಡಿ ಮುದ್ನಾಳ್, ವಿದ್ಯಾಧರ ಗುರೂಜಿ ಸೇರಿದಂತೆ ಅನೇಕ ಹಿರಿಯ ಸ್ವಾತಂತ್ರ್ಯ…

  • ಯಾದಗಿರಿ: ಎಐಡಿಎಸ್‌ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ

    ಯಾದಗಿರಿ: ಎಐಡಿಎಸ್‌ಒ ವತಿಯಿಂದ ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ ಆಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ದಶಕಗಳೇ ಸಂದಿದ್ದರೂ ಕ್ರಾಂತಿಕಾರಿ ಹೋರಾಟಗಾರರ ಆಶಯದ ಶೋಷಣೆಮುಕ್ತ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಯಾದಗಿರಿ ಜಿಲ್ಲಾ ಸಮಿತಿ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸಾಂಕೇತಿಕ ಆಚರಣೆಗೆ ಸೀಮಿತಗೊಳಿಸದೆ, ‘ವಿದ್ಯಾರ್ಥಿಗಳ ಪ್ರತಿಜ್ಞಾ ದಿನ’ವನ್ನಾಗಿ ಆಚರಿಸಲಾಯಿತು. ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಲ್ಲಿ ನೂರಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸುವ ಸಂಕಲ್ಪದೊಂದಿಗೆ ಗಂಭೀರ ಪ್ರತಿಜ್ಞೆ…

  • ಯಾದಗಿರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಸಮಾನತೆಯ ತಳಹದಿಯ ಮೇಲೆ ರಾಷ್ಟ್ರ ನಿರ್ಮಾಣವಾಗಿದೆ – ಸಚಿವ ಡಾ. ಶರಣಪ್ರಕಾಶ ಪಾಟೀಲ್

    ಯಾದಗಿರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಸಮಾನತೆಯ ತಳಹದಿಯ ಮೇಲೆ ರಾಷ್ಟ್ರ ನಿರ್ಮಾಣವಾಗಿದೆ – ಸಚಿವ ಡಾ. ಶರಣಪ್ರಕಾಶ ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ನಾವಿಂದು ಸ್ವಾತಂತ್ರ್ಯ ಅನುಭವಿಸುತ್ತಿದ್ದು, ಸಮಾನತೆಯ ತಳಹದಿಯ ಮೇಲೆ ನಮ್ಮ ರಾಷ್ಟ್ರ ನಿರ್ಮಾಣವಾಗಿದೆ ಎಂದು ವೈ ದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿ,ವಿವಿಧ ಕವಾಯತು ಪಡೆಗಳಿಂದ…

↑
Suddi Belaku