by
Tag: Suddi Belaku

ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ, ಬದಲಾವಣೆಗೆ ಪ್ರೇರಣೆ : ಸಚಿವ ಡಾ. ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರಸಕ್ತ ದಿನಗಳಲ್ಲಿ ನಾವು ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದರು, ಅತಿಯಾದ ಒತ್ತಡದಲ್ಲಿ ಜೀವನ ಕಳೆಯುತ್ತಿದ್ದೇವೆ, ಬದುಕಿನ ಸ್ವಲ್ಪ ಸಮಯ ಅಧ್ಯಾತ್ಮಿಕ ಕ್ಷೇತ್ರಕ್ಕೆ ಮೀಸಲಿಡಬೇಕು, ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುವ ಜೊತೆಗೆ ಸಕಾರಾತ್ಮಕ ಚಿಂತನೆಗಳು ಮೂಡಿ, ಪರಿವರ್ತನೆಗೆ ಪ್ರೇರಣೆ ಸಿಗುತ್ತದೆ ಎಂದು ರಾಜ್ಯ ವೈದ್ಯಕೀಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ನಾಡಿನ ಪ್ರಸಿದ್ದ ಮಠಗಳಲ್ಲಿ ಒಂದಾದ ತಾಲ್ಲೂಕಿನ…

ನಾರಾಯಣ ಗೌಡರ ಕುರಿತ ಯತ್ನಾಳ್ ಹೇಳಿಕೆ ಖಂಡನೀಯ: ಭೀಮು ನಾಯಕ್ ಆಕ್ರೋಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡರ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಗುರವಾಗಿ ಮಾತನಾಡಿರುವುದನ್ನು ಕರವೇ ಯಾದಗಿರಿ ಜಿಲ್ಲಾಧ್ಯಕ್ಷ ಭೀಮು ನಾಯಕ್ ತೀವ್ರವಾಗಿ ಖಂಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಳೆದ ಮೂರು ದಶಕಗಳಿಂದ ಲಕ್ಷಾಂತರ ಜನರಿಗೆ ಕನ್ನಡದ ದೀಕ್ಷೆ ನೀಡಿ, ಕನ್ನಡ ನಾಡು-ನುಡಿ ಹಾಗೂ ಗಡಿ ಸೇರಿದಂತೆ ವಿವಿಧ ಕನ್ನಡಪರ ಹೋರಾಟಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ನಾರಾಯಣ ಗೌಡರ ಕುರಿತು ಯತ್ನಾಳ್ ಅವರು ಹಗುರವಾಗಿ ಮಾತನಾಡಬಾರದು ಎಂದು ಆಗ್ರಹಿಸಿದರು.…
by

ಶಹಾಪುರ: ಉದ್ಯೋಗ ಸೃಷ್ಟಿ ಹಾಗೂ ವಲಸೆ ತಡೆಗೆ ಆ.15ರಿಂದ ಗ್ರಾ.ಪಂ.ಗಳಲ್ಲಿ ‘ಜಾಬ್ ಕಾರ್ಡ್ ಮೇಳ’
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮೀಣ ಜನರಿಗೆ ಅಕುಶಲ ಕೆಲಸವನ್ನು ಒದಗಿಸಲು ಆಗಸ್ಟ್ 15ರಿಂದ ಸೆಪ್ಟೆಂಬರ್ 15 ರವರೆಗೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜಾಬ್ ಕಾರ್ಡ್ ಮೇಳವನ್ನು ಹಮ್ಮಿಕೊಳ್ಳುತ್ತಿದ್ದು, ಜಾಬ್ ಕಾರ್ಡ್ ಇಲ್ಲದ ಅರ್ಹ ಫಲಾನುಭವಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬರ ಪರಿಸ್ಥಿತಿಯಿಂದ ಗ್ರಾಮೀಣ…
by

ಆದರ್ಶ ಮೌಲ್ಯಗಳ ಪರಿಪಾಲನೆಯಿಂದ ಜೀವನದಲ್ಲಿ ಶ್ರೇಯಸ್ಸು: ರಂಭಾಪುರಿ ಜಗದ್ಗುರುಗಳು
ಸುದ್ದಿ ಬೆಳಕು ವಾರ್ತೆ ಚನ್ನಗಿರಿ : ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಪರಿಶ್ರಮ ಮತ್ತು ಸಾಧನೆಯಿಲ್ಲದೇ ಜೀವನದಲ್ಲಿ ಉನ್ನತಿ ಕಾಣಲು ಸಾಧ್ಯವಿಲ್ಲ. ಸದ್ಗುಣ ಸಂಸ್ಕಾರ ಮತ್ತು ಸಚ್ಚಾರಿತ್ರö್ಯದಿಂದ ಬದುಕು ಶ್ರೀಮಂತಗೊಳ್ಳಲು ಸಾಧ್ಯವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಲಿಂ.ಸಿದ್ಧಲಿAಗ ಶಿವಾಚಾರ್ಯರ ೫೫ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಏನೆಲ್ಲ ಸಂಕಷ್ಟಗಳು ಬಂದರೂ…
by

ಯಾದಗಿರಿ ನಗರದ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವೂ ಪ್ರತಿ ವರ್ಷ ವಿಸ್ತಾರವಾಗುತ್ತಿದೆ, ಇಲ್ಲಿನ ಜನರ ಬೇಡಿಕೆಯಂತೆ ನಗರದ ಎಲ್ಲಾ ವಾರ್ಡ್ಗಳಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ್ ಸಂಖ್ಯೆ. ೨೨ರ ವೀರಶೈವ ಕಲ್ಯಾಣ ಮಂಟಪದ ಹತ್ತಿರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಟಿಎಸ್‌ಪಿ) ಯೋಜನೆಯಡಿಯಲ್ಲಿ ನಿರ್ಮಿತಿ ಕೇಂದ್ರದಿAದ ಅಂದಾಜು ೨೫ ಲಕ್ಷ ರೂ, ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಸಿಸಿ ರಸ್ತೆ…
by

ವಿಶ್ವಾರಾಧ್ಯರು ಜಗದ ಜನರನ್ನು ಉದ್ದರಿಸಿದ ಜಗಜಟ್ಟಿ: ಡಾ. ಗಂಗಾಧರ ಶ್ರೀ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿಶ್ವಾರಾಧ್ಯರು ಅಣಿಮಾದಿ ಅಷ್ಟಸಿದ್ಧಿಗಳನ್ನು ಕಟ್ಟಿ ಮೆರೆದು ಜಗದ ಸಂಚಾರ ಮಾಡುತ್ತಾ ಜನರನ್ನು ಉದ್ಧರಿಸಿದ ಜಗಜಟ್ಟಿ ಅವರಾಗಿದ್ದರೆಂದು ಪೀಠಾಧಿಪತಿ ಡಾ. ಗಂಗಾಧರ ಮಹಾಸ್ವಾಮಿಗಳು ನುಡಿದರು. ಅಬ್ಬೆ ತುಮಕೂರಿನ ಶ್ರೀ ವಿಶ್ವಾರಾಧ್ಯರ ಸುಕ್ಷೇತ್ರದಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ಪರಂಪರಾ ಪಾದಯಾತ್ರೆಯ ಸಮಾರೋಪ ಹಾಗೂ ಅಮವಾಸ್ಯೆಯ ಶಿವಾನುಭವ ಗೋಷ್ಠಿಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಗಂವ್ಹಾರದ ತೋಪಕಟ್ಟಿ ಹಿರೇಮಠದಲ್ಲಿ ಜನ್ಮ ತಾಳಿದ ವಿಶ್ವಾರಾಧ್ಯರು ಕಾಶೀಯಲ್ಲಿ ವ್ಯಾಸಂಗ ಪಡೆದು ಕಾಶೀ ಘನಪಂಡಿತರಾಗುತ್ತಾರೆ. ತಾವು ಸಂಪಾದಿಸಿದ ಜ್ಞಾನವನ್ನು…
by

ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ
ಮುಧೋಳ ಇಂದಿರಾಗಾಂಧಿ ವಸತಿ ಶಾಲೆಗೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ; ಅಡುಗೆ ಸಿಬ್ಬಂದಿಗೆ ತರಾಟೆ ಸುದ್ದಿ ಬೆಳಕು ವಾರ್ತೆ ಸೇಡಂ : ಸೇಡಂ ತಾಲೂಕಿನ ಮುಧೋಳ ಇಂದಿರಾಗಾಂಧಿ ವಸತಿ ಶಾಲೆ ಮಕ್ಕಳಿಗೆ ಆಹಾರದಲ್ಲಾದ ಆತಂಕ ಹಾಗೂ ಆರೋಗ್ಯ ಸಮಸ್ಯೆ ಆಲಿಸಲು ಸೋಮವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದು ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ…
by















