Tag: Suddi Belaku

  • ತಕ್ಷಣ ಬರ ಪರಿಹಾರ ಕಾಮಗಾರಿ ಆರಂಭಿಸಿ: ಟಿ.ಎನ್. ಭೀಮುನಾಯಕ ಆಗ್ರಹ

    ತಕ್ಷಣ ಬರ ಪರಿಹಾರ ಕಾಮಗಾರಿ ಆರಂಭಿಸಿ: ಟಿ.ಎನ್. ಭೀಮುನಾಯಕ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಬರ ಘೋಷಣೆ ಮಾಡುವ ಪ್ರಕ್ರಿಯೆಯಲ್ಲೇ ಕಾಲಹರಣ ಮಾಡದೆ, ಜಿಲ್ಲೆಯ ಸಂಕಷ್ಟದಲ್ಲಿರುವ ರೈತರ ನೆರವಿಗೆ ತಕ್ಷಣ ಧಾವಿಸಿ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ವಿಶೇಷ ಬರಗಾಲ ಪರಿಹಾರ ಪ್ಯಾಕೇಜ್…

  • ರಾಯಚೂರಿನಲ್ಲಿ ‘ನಶಾ ಮುಕ್ತ್ ಯುವಾ ಫಾರ್ ವಿಕಸಿತ ಭಾರತ್’ ಅಭಿಯಾನಕ್ಕೆ ಚಾಲನೆ
    ,

    ರಾಯಚೂರಿನಲ್ಲಿ ‘ನಶಾ ಮುಕ್ತ್ ಯುವಾ ಫಾರ್ ವಿಕಸಿತ ಭಾರತ್’ ಅಭಿಯಾನಕ್ಕೆ ಚಾಲನೆ

    ಸುದ್ದಿ ಬೆಳಕು ವಾರ್ತೆ ರಾಯಚೂರು : ಭಾರತ ಸರಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಯುವ ವ್ಯವಹಾರಗಳ ಇಲಾಖೆಯ ಮೈ ಭಾರತ್ – ಎನ್ಎಸ್ಎಸ್ ನಿರ್ದೇಶನಾಲಯದ ವತಿಯಿಂದ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಶಾ ಮುಕ್ತ್ ಯುವಾ ಫಾರ್ ವಿಕ್ಸಿತ್ ಭಾರತ್ ಸಂಕಲ್ಪ ಅಭಿಯಾನದ ಅಂಗವಾಗಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಆಯೋಜಿಸಿದ್ದ ಸದರಿ ಕಾರ್ಯಮವನ್ನು ಮುಖ್ಯ ಅತಿಥಿಯಾಗಿ ಆಹ್ವಾನಿತರಾಗಿದ್ದ ಡಾ. ಸತೀಶ್, ತಾಲೂಕಾ ಆರೋಗ್ಯಾಧಿಕಾರಿ ಇವರು…

  • ಯಾದಗಿರಿ, ವಡಗೇರಾ ಬರ ಘೋಷಣೆ: ಶಾಸಕ ಚನ್ನಾರೆಡ್ಡಿ ತುನ್ನೂರ್‌ಗೆ ಸನ್ಮಾನ

    ಯಾದಗಿರಿ, ವಡಗೇರಾ ಬರ ಘೋಷಣೆ: ಶಾಸಕ ಚನ್ನಾರೆಡ್ಡಿ ತುನ್ನೂರ್‌ಗೆ ಸನ್ಮಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಹಾಗೂ ವಡಗೇರಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರನ್ನು ಯಾದಗಿರಿ ಮತ್ತು ವಡಗೇರಾ ತಾಲೂಕಿನ ರೈತರು ಹಾಗೂ ಕಾಂಗ್ರೆಸ್ ಮುಖಂಡರು ಶಾಸಕರ ಕಾರ್ಯಾಲಯದಲ್ಲಿ ಸನ್ಮಾನಿಸಿದರು. ಬರಪೀಡಿತ ತಾಲೂಕುಗಳ ಘೋಷಣೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ವಿವಿಧ ಬರ ಪರಿಹಾರ ಕ್ರಮಗಳು ಹಾಗೂ ಸೌಲಭ್ಯಗಳು ದೊರೆಯುವ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.…

  • ಕಲ್ಯಾಣ ಕರ್ನಾಟಕಕ್ಕೆ ₹5,000 ಕೋಟಿ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್

    ಕಲ್ಯಾಣ ಕರ್ನಾಟಕಕ್ಕೆ ₹5,000 ಕೋಟಿ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಕಲಬುರಗಿ : “ಬೆಂಗಳೂರು ನಾಡಿನ ಕಿರೀಟವಾದರೆ, ಜಗಜ್ಯೋತಿ ಬಸವೇಶ್ವರರ ಕರ್ಮಭೂಮಿ ಹಾಗೂ ಸಾಮಾಜಿಕ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕವು ರಾಜ್ಯದ ನೈಜ ಶಕ್ತಿಪೀಠವಿದ್ದಂತೆ. ಕಲ್ಯಾಣದ ನಿಜವಾದ ಕಲ್ಯಾಣವೇ ನಮ್ಮ ಸರ್ಕಾರದ ಮೂಲ ಮಂತ್ರವಾಗಿದೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿದರು. ನಗರದ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದ ನಂತರ ಅವರು…

  • ಕೆಂಭಾವಿಯಲ್ಲಿ ಟ್ಯಾಕ್ಸಿ ನಿಲ್ದಾಣ ನಿರ್ಮಾಣಕ್ಕೆ ಚಾಲಕರ ಒಕ್ಕೂಟ ಮನವಿ

    ಕೆಂಭಾವಿಯಲ್ಲಿ ಟ್ಯಾಕ್ಸಿ ನಿಲ್ದಾಣ ನಿರ್ಮಾಣಕ್ಕೆ ಚಾಲಕರ ಒಕ್ಕೂಟ ಮನವಿ

    ಸುದ್ದಿ ಬೆಳಕು ವಾರ್ತೆ ಸುರಪುರ : ಪಟ್ಟಣದಲ್ಲಿ ಹೆಚ್ಚುತ್ತಿರುವ ಜನಸಂದಣಿ ಹಾಗೂ ವಾಹನ ದಟ್ಟಣೆಯ ನಡುವೆ ಟ್ಯಾಕ್ಸಿ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳವಿಲ್ಲದೆ ಸಾರ್ವಜನಿಕರಿಗೆ ಮತ್ತು ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದ್ದು, ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣ ಗೋಡೆ ಎದುರಿಗಿರುವ ಸರ್ಕಾರಿ ಜಾಗದಲ್ಲಿ ಸುಸಜ್ಜಿತ ಟ್ಯಾಕ್ಸಿ ನಿಲ್ದಾಣ ನಿರ್ಮಿಸಿಕೊಡಲು ಅನುಕೂಲ ಕಲ್ಪಿಸಬೇಕು ಎಂದು ಕರ್ನಾಟಕ ಚಾಲಕರ ಒಕ್ಕೂಟವು (ರಿ.) ಕೆಂಭಾವಿ ಪುರಸಭೆಗೆ ಲಿಖಿತ ಮನವಿ ಸಲ್ಲಿಸಿದೆ. ಸುರಪುರ ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಕೆಂಭಾವಿ ಪಟ್ಟಣವು ದಿನದಿಂದ ದಿನಕ್ಕೆ…

  • ಯಾದಗಿರಿ ಜಿಲ್ಲೆಯ ಉಳಿದ 5 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್‌ಗೆ ಸೇರ್ಪಡೆ: ಜೆಡಿಎಸ್ ಸ್ವಾಗತ

    ಯಾದಗಿರಿ ಜಿಲ್ಲೆಯ ಉಳಿದ 5 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್‌ಗೆ ಸೇರ್ಪಡೆ: ಜೆಡಿಎಸ್ ಸ್ವಾಗತ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯ ಸರ್ಕಾರ ತನ್ನ ಬರ ಪೀಡಿತ ತಾಲೂಕಿನ ಮೂರನೇ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಉಳಿದ 5 ತಾಲೂಕುಗಳನ್ನು ಗ್ರೌಂಡ್ ಟ್ರೂಥಿಂಗಿಗೇ ಸೇರ್ಪಡೆ ಮಾಡಿದ್ದು ನಮ್ಮ ಶಾಸಕ ಶರಣಗೌಡ ಕಂದಕೂರ ಅವರ ಹೋರಾಟಕ್ಕೆ ಸಂದ ಗೆಲುವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ತಿಂಗಳು ರಾಜ್ಯ ಸರ್ಕಾರ ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಮಾತ್ರ ಸೇರಿಸಿತ್ತು.…

  • ಬಿಸಿಲಿನ ತಾಪಕ್ಕೆ ತತ್ತರಿಸಿದ ಜಾನುವಾರುಗಳು..!

    ಬಿಸಿಲಿನ ತಾಪಕ್ಕೆ ತತ್ತರಿಸಿದ ಜಾನುವಾರುಗಳು..!

    ಮಳೆ ಕೊರತೆ, ಮೇವು-ನೀರಿನ ಅಭಾವದಿಂದ ಮೂಕ ಪ್ರಾಣಿಗಳ ಪರದಾಟ; ರೈತರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹ ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆ ಎದುರಾಗಿದೆ. ನಗರದ ಅಂಬೇಡ್ಕರ್ ವೃತ್ತದ ಮುಖ್ಯರಸ್ತೆ ಪಕ್ಕದಲ್ಲಿರುವ ಶಕ್ತಿಮಾತೆ ಗಾಳಿ ಮರಗಮ್ಮ ದೇವಸ್ಥಾನದ ಆವರಣದಲ್ಲಿನ ದೊಡ್ಡ ಬಸವ ಮರದ ಕೆಳಗೆ ಜಾನುವಾರುಗಳು ಬಿಸಿಲಿನಿಂದ ತಪ್ಪಿಸಿಕೊಳ್ಳಲು ವಿಶ್ರಮಿಸುತ್ತಿರುವ ದೃಶ್ಯ ಕಂಡುಬಂದಿದೆ. ಗುರುವಾರ ಮಧ್ಯಾಹ್ನ 3…

  • ದೋರನಹಳ್ಳಿಯಲ್ಲಿ ಭಗವಾನ್ ವಿಶ್ವಕರ್ಮ ಜಯಂತಿ ಸಂಭ್ರಮ

    ದೋರನಹಳ್ಳಿಯಲ್ಲಿ ಭಗವಾನ್ ವಿಶ್ವಕರ್ಮ ಜಯಂತಿ ಸಂಭ್ರಮ

    ಸುದ್ದಿ ಬೆಳಕು ವಾರ್ತೆ ಶಹಾಪುರ : “ತಮ್ಮ ಅದ್ಭುತ ಕಲಾ ನೈಪುಣ್ಯ, ಕಠಿಣ ಪರಿಶ್ರಮ ಮತ್ತು ಸೃಜನಶೀಲತೆಯ ಮೂಲಕ ಇಡೀ ಜಗತ್ತಿಗೆ ಅಪಾರ ಕೊಡುಗೆ ನೀಡಿರುವ ವಿಶ್ವಕರ್ಮ ಸಮುದಾಯದವರು ನೈಜ ವಿಶ್ವ ನಿರ್ಮಾತೃಗಳು,” ಎಂದು ವಿಶ್ವಕರ್ಮ ಸಮಾಜದ ಯುವ ಮುಖಂಡ ಮಂಜುನಾಥ ಕಂಚಗಾರ ಪ್ರತಿಪಾದಿಸಿದರು. ದೋರನಹಳ್ಳಿ  ಪಟ್ಟಣದ ಶ್ರೀ ಕಾಳಿಕಾದೇವಿ ದೇವಸ್ಥಾನದ ಆವರಣದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ಭಕ್ತಿಭಾವದಿಂದ ಆಯೋಜಿಸಲಾಗಿದ್ದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ದೋರನಹಳ್ಳಿ ವಿಶ್ವಕರ್ಮ…

  • ಯಾದಗಿರಿಯಲ್ಲಿ ಗಣೇಶೋತ್ಸವದ ಡಿಜೆ ನಿಷೇಧಕ್ಕೆ ಶಿವಸೇನಾ ಆಕ್ರೋಶ: 48 ಗಂಟೆ ಗಡುವು

    ಯಾದಗಿರಿಯಲ್ಲಿ ಗಣೇಶೋತ್ಸವದ ಡಿಜೆ ನಿಷೇಧಕ್ಕೆ ಶಿವಸೇನಾ ಆಕ್ರೋಶ: 48 ಗಂಟೆ ಗಡುವು

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಉತ್ಸವದ ಸಂದರ್ಭದಲ್ಲಿ ಡಿಜೆ ಮತ್ತು ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹೊರಡಿಸಿರುವ ಕಟ್ಟುನಿಟ್ಟಿನ ಸೂಚನೆಗಳ ವಿರುದ್ಧ ಶಿವಸೇನಾ ಪಕ್ಷ ಆಕ್ರೋಶ ವ್ಯಕ್ತಪಡಿಸಿದ್ದು, ಆದೇಶವನ್ನು 48 ಗಂಟೆಯೊಳಗೆ ಹಿಂಪಡೆಯಬೇಕು. ಇಲ್ಲವಾದರೆ ಜಿಲ್ಲಾಡಳಿತದ ಕಚೇರಿ ಎದುರು ಗಣೇಶ ಮೂರ್ತಿಯೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಯಾದಗಿರಿ ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿವಸೇನಾ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಾಂಕ ನಾಯಕ, ರಾಜ್ಯ ಕಾರ್ಯದರ್ಶಿ…

  • ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ 4ನೇ ವಾರ್ಷಿಕ ಮಹಾಸಭೆ: ಸಹಕಾರ ಸಂಘಗಳ ಬಲವರ್ಧನೆಗೆ ಕರೆ

    ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ 4ನೇ ವಾರ್ಷಿಕ ಮಹಾಸಭೆ: ಸಹಕಾರ ಸಂಘಗಳ ಬಲವರ್ಧನೆಗೆ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : “ರಾಜ್ಯದ ಸಹಕಾರ ಚಳವಳಿಯ ಬಲವರ್ಧನೆ ಹಾಗೂ ಸುಸ್ಥಿರ ಬೆಳವಣಿಗೆಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರಂತರವಾಗಿ ಶ್ರಮಿಸುತ್ತಿದೆ. ಪ್ರಾಥಮಿಕ ಸಹಕಾರ ಸಂಘಗಳಿಗೆ ಸೂಕ್ತ ಶಿಕ್ಷಣ, ನಾಯಕತ್ವ ತರಬೇತಿ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಮಹಾಮಂಡಳ ವ್ಯವಸ್ಥಿತವಾಗಿ ಹಮ್ಮಿಕೊಳ್ಳುತ್ತಾ ಬಂದಿದೆ,” ಎಂದು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರು ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥರೆಡ್ಡಿ ದರ್ಶನಾಪುರ ತಿಳಿಸಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಯಾದಗಿರಿ ಜಿಲ್ಲಾ…

↑
Suddi Belaku