by
Tag: Yadgir News

ಕಲ್ಯಾಣ ಕರ್ನಾಟಕ ಅಸಮತೋಲನ ನಿವಾರಣೆಗೆ ಸೆ.17ರಂದು ಸಂಕಲ್ಪ ಸಮಾವೇಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂದುವರಿದಿರುವ ಪ್ರಾದೇಶಿಕ ಅಸಮತೋಲನ ನಿವಾರಣೆ ಹಾಗೂ ಸಂವಿಧಾನದ ಕಲಂ 371(ಜೆ) ಸಮರ್ಪಕ ಜಾರಿಗೆ ಆಗ್ರಹಿಸಿ ಸೆ.17ರಂದು ಕಲಬುರಗಿಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಯ್ಯ ಕಮತಗಿ ತಿಳಿಸಿದರು. ಭಾನುವಾರ ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿ ಅನುದಾನ ವ್ಯಯವಾಗಿದ್ದರೂ…

ಯಾದಗಿರಿಯಲ್ಲಿ ಸೆ.17ರಂದು ವಿಶ್ವಕರ್ಮ ಜಯಂತ್ಯೋತ್ಸವ: ಸಿದ್ಧತೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೆ.17 ರಂದು ಮಧ್ಯಾಹ್ನ 2ಕ್ಕೆ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ನಡೆಯಲಿದೆ ಎಂದು ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠಾಧೀಶ ಹಾಗೂ ಯಾದಗಿರಿಯ ವಿಶ್ವಕರ್ಮ ಏಕದಂಡಗಿ ಮಠದ ಶ್ರೀ ರವೀಂದ್ರ ಸ್ವಾಮೀಜಿ ಹೇಳಿದರು. ಶನಿವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಯ೯ಕ್ರಮಕ್ಕೂ ಮೊದಲಿಗೆ…
by

ಅಬ್ಬೆತುಮಕೂರು ವಿಶ್ವಾರಾಧ್ಯ ಮಠದಲ್ಲಿ ಶ್ರಾವಣ ಮಾಸದ ಮಹಾ ಮಂಗಲ: ಪುರಾಣ ಪ್ರವಚನ ಆಲಿಸಲು ಕರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶ್ರಾವಣ ಮಾನದಲ್ಲಿ ಪುರಾಣ ಪ್ರವಚನಗಳನ್ನು ಆಲಿಸುವುದು ಮತ್ತು ಪುಣ್ಯ ಶ್ರವಣದಿಂದ ಅಂತರಂಗ ಶುದ್ದಿಯಾಗುತ್ತದೆಯೆಂದು ವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ.ಗಂಗಾಧರ ಮಹಾ ಸ್ವಾಮಿಗಳು ನುಡಿದರು.ಅಬ್ಬೆತುಮಕೂರಿನ ಶ್ರೀ ವಿಶ್ವಾರಾಧ್ಯ ಮಠದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರಾವಣ ಮಾಸದ ವಿಶೇಷ ಪೂಜಾ ಮಹಾ ಮಂಗಲ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇಡೀ ವರುಷದುದ್ದಕ್ಕೂ ಪ್ರತಿಯೊಬ್ಬ ಮನುಷ್ಯ ಜೀವಿ ಸಾಂಸಾರಿಕ ಜೀವನದಲ್ಲಿ ತೊಡಗಿಸಿಕೊಂಡು ಅನೇಕ ಎಡರು-ತೊಡರುಗಳನ್ನು ಅನುಭವಿಸುತ್ತಾನೆ. ಈ ಸಂಕಷ್ಟಗಳಿಂದ ನಿಗಲು ಶ್ರಾವಣ ಮಾಸದಲ್ಲಿ ಪುರಾಣ…
by

ಗುರುಮಿಠಕಲ್ ಕರವೇ ತಾಲೂಕು ಘಟಕ ವಿಸರ್ಜನೆ: ಹೊಸ ಘಟಕ ರಚನೆಗೆ ಸಿದ್ಧತೆ
ಸುದ್ದಿ ಬೆಳಕು ವಾರ್ತೆ ಗುರುಮಿಠಕಲ್: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಗುರುಮಿಠಕಲ್ ತಾಲೂಕು ಅಧ್ಯಕ್ಷರಾದ ಶರಣಬಸ್ಸಪ್ಪ ಎಲ್ಹೆರಿ ಹಗೂ ಎಲ್ಲ ಪದಧಿಕಾರಿಗಳು ಸೇರಿದಂತೆ. ಇಂದಿನಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಜಿಲ್ಲಾಧ್ಯಕ್ಷರಾದ ಟಿ.ಎನ್. ಭೀಮುನಾಯಕ ಆದೇಶದ ಮೇರಗೆ ಸಂಘಟನೆಯ ಶಿಸ್ತು, ನಿಯಮಾವಳಿ ಹಾಗೂ ಸಂಘಟನಾ ಹಿತಾಸಕ್ತಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೆ ತಾಲೂಕು ಘಟಕದ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲಾ ಹುದ್ದೆಗಳು ಹಾಗೂ ಜವಾಬ್ದಾರಿಗಳನ್ನು ಈ ಮೂಲಕ ರದ್ದುಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಗುರುಮಿಠಕಲ್ ತಾಲೂಕಿನಲ್ಲಿ ಸಂಘಟನೆಯ ಚಟುವಟಿಕೆಗಳನ್ನು ಸಮರ್ಪಕವಾಗಿ…
by

ಖರ್ಗೆ ವೇದಿಕೆ ಶುದ್ಧೀಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ರದ್ದತಿಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ವೇದಿಕೆಯನ್ನು ಶುದ್ಧಗೊಳಿಸುವುದನ್ನು ಖಂಡಿಸಿ ಹಾಗೂ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರವರ ವಿರುದ್ದ ದುರುದ್ದೇಶಪೂರಿತ ಎಫ್ ಐಆರ್ ದಾಖಲಿಸಿದ ಉತ್ತರಾಖಂಡ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಶನಿವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಚನ್ನಾರೆಡ್ಡಿ ಪಾಟೀಲ್ ಶುನ್ನೂರ, ಕಳೆದ ತಿಂಗಳ ಅಗಸ್ಟ್ 8ನೇ ರಂದು ಉತ್ತರಾಖಂಡದ ಹಲದ್ವಾನಿ…
by

ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಇ-ಕೆವೈಸಿ ಪೂರ್ಣಗೊಳಿಸಲು: ಸಾಹುಕಾರ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ಅರ್ಹ ರೈತರಿಗೆ ಕಂತಿನ ಹಣ ನೇರವಾಗಿ ಖಾತೆಗೆ ಜಮೆಯಾಗಲು ಇ-ಕೆವೈಸಿ (e-KYC) ಪೂರ್ಣಗೊಳಿಸುವುದು ಅಗತ್ಯವಾಗಿದೆ. ಆದ್ದರಿಂದ ರೈತರು ಯಾವುದೇ ವಿಳಂಬ ಮಾಡದೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಧರ ಸಾಹುಕಾರ ಮನವಿ ಮಾಡಿದ್ದಾರೆ. ರೈತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ…
by

ಯಾದಗಿರಿಯಲ್ಲಿ ಬ್ಯಾಂಕ್ ನೌಕರರ ಪ್ರತಿಭಟನೆ: 5 ದಿನಗಳ ಕಾರ್ಯವ್ಯವಸ್ಥೆಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬ್ಯಾಂಕಿಂಗ್ ಕ್ಷೇತ್ರದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನೇತೃತ್ವದಲ್ಲಿ ಶುಕ್ರವಾರ ಯಾದಗಿರಿ ನಗರದ ಎಸ್ಬಿಐ ಮುಖ್ಯ ಶಾಖೆಯಿಂದ ಶಾಸ್ತ್ರೀ ವೃತ್ತದವರೆಗೆ ನಡಿಗೆ ಮೂಲಕ ಪ್ರತಿಭಟನೆ ನಡೆಸಲಾಯಿತು. ಬ್ಯಾಂಕ್ ಸಿಬ್ಬಂದಿ ಹಾಗೂ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಬ್ಯಾಂಕ್ ಆಡಳಿತ ಮಂಡಳಿಗಳ ಗಮನ ಸೆಳೆಯುವ ಉದ್ದೇಶದಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ವಿವಿಧ ಬ್ಯಾಂಕ್ಗಳ ಸಿಬ್ಬಂದಿ ಹಾಗೂ ಅಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ,…
by

ಯಾದಗಿರಿ ಬರ ಘೋಷಣೆಗೆ ಆಗ್ರಹ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರವೇ ಮುತ್ತಿಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಉಳಿದ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೆ ಜಿಲ್ಲಾ ಕೆಡಿಪಿ ಸಭೆ ನಡೆಸಲು ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಘಟಕದ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಬಳಿಕ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ, ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದರೂ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೆ ಕೆಡಿಪಿ ಸಭೆ ನಡೆಸಲು ಮುಂದಾಗಿರುವ ಸರ್ಕಾರದ ಧೋರಣೆಗೆ…
by

ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ದರ್ಶನಾಪೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಛೇರಿ ಕಟ್ಟಡ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಳ್ಳಿ ಅಂದಾಗ ಮಾತ್ರ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪ ದರ್ಶನಾಪೂರ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ೧.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ನೂತನ ಕಛೇರಿಯ ಕಟ್ಟಡ ಕಾಮಗಾರಿಯನ್ನು ವಿಕ್ಷೀಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ,…
by

ಬರಗಾಲ ಸಮಸ್ಯೆ ಆಲಿಸುವಲ್ಲಿ ತಾಳ್ಮೆ ಕಳೆದುಕೊಂಡ ಸಚಿವ ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ತ್ರೆöಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಲು ನಗರಕ್ಕೆ ಆಗಮಿಸಿದ ರಾಜ್ಯ ವೈಧ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉಧ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಜಿಲ್ಲೆಯ ವಿವಿಧ ಸಂಘಟನೆಗಳ, ಹೋರಾಟಗಾರರ ಜೊತೆ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕಛೇರಿಯಲ್ಲಿ ಜಿಲ್ಲೆಯ ಬರಗಾಲ ಸಮಸ್ಯೆ ಆಲಿಸುವಲ್ಲಿ ತಾಳ್ಮೆ ಕಳೆದುಕೊಂಡ ಘಟನೆ ಜರುಗಿತು. ಸರ್ವ ಸಂಘಟನೆಗಳ ಒಕ್ಕೂಟದ ನಿಯೋಗದ ಅಧ್ಯಕ್ಷ ಮಲ್ಲಿಕಾರ್ಜುನ ಜಲ್ಲಪ್ಪನೋರ ರಾಮಸಮುದ್ರ…
by















