Tag: Yadgir

  • ಕಡೆಚೂರಿನಲ್ಲಿ ಕರ್ನಾಟಕ ಚಾಲಕರ ಒಕ್ಕೂಟದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ

    ಕಡೆಚೂರಿನಲ್ಲಿ ಕರ್ನಾಟಕ ಚಾಲಕರ ಒಕ್ಕೂಟದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ

    ಸುದ್ದಿ ಬೆಳಕು ವಾರ್ತೆ ಕಡೆಚೂರು : ಕರ್ನಾಟಕ ಚಾಲಕರ ಒಕ್ಕೂಟದ ಯಾದಗಿರಿ ತಾಲೂಕು ಘಟಕದ ವತಿಯಿಂದ ತಾಲೂಕಿನ ಕಡೆಚೂರು ಗ್ರಾಮದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಗ್ರಾಮದ ಆಟೋ ನಿಲ್ದಾಣದಲ್ಲಿ ಆಟೋ ಘಟಕದ ಅಧ್ಯಕ್ಷ ರಾಜು ಮಡಿವಾಳ ಅವರ ನೇತೃತ್ವದಲ್ಲಿ ಹಾಗೂ ಉಪಾಧ್ಯಕ್ಷ ಖಾಸಿಂ ಅಲಿ ಮತ್ತು ಸದಸ್ಯರ ಸಮ್ಮುಖದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಾಯಿ ಭುವನೇಶ್ವರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ…

  • ಯಾದಗಿರಿಯಲ್ಲಿ ಕರ್ನಾಟಕ ಚಾಲಕರ ಒಕ್ಕೂಟದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ

    ಯಾದಗಿರಿಯಲ್ಲಿ ಕರ್ನಾಟಕ ಚಾಲಕರ ಒಕ್ಕೂಟದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ಚಾಲಕರ ಒಕ್ಕೂಟದ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಟ್ಯಾಕ್ಸಿ ನಿಲ್ದಾಣದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಬಸುಗೌಡ ಎಂ. ಚಟ್ನಳ್ಳಿ ಅವರ ನೇತೃತ್ವದಲ್ಲಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ತಾಯಿ ಭುವನೇಶ್ವರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದೇವರಮನೆ,…

  • ಯಾದಗಿರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಹಲವು ಮುಖಂಡರ ಸೇರ್ಪಡೆ

    ಯಾದಗಿರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಹಲವು ಮುಖಂಡರ ಸೇರ್ಪಡೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಹೋಟೆಲ್ ಎನ್‌ವಿಎಂ ಸಭಾಂಗಣದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮತ್ತು ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ ರೆಡ್ಡಿ ವೆಂಕಟರೆಡ್ಡಿ ಮುದ್ನಾಳ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡರು. ನಗರದ ಸ್ಟೇಷನ್ ಏರಿಯಾ ಹಾಗೂ ಮಾತಾ ಮಾಣಿಕೇಶ್ವರಿ ನಗರದ ಪ್ರಮುಖ…

  • ಯಾದಗಿರಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ: ವಿವಿಧೆಡೆ ಕರವೇಯಿಂದ ಧ್ವಜಾರೋಹಣ

    ಯಾದಗಿರಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ: ವಿವಿಧೆಡೆ ಕರವೇಯಿಂದ ಧ್ವಜಾರೋಹಣ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯ ಬಗ್ಗೆ ಪ್ರೀತಿ ಹೊಂದಿರುವುದರ ಜತೆಗೆ ನಾಡಿನ ಭಾಷೆಯಾದ ಕನ್ನಡದ ಬಗ್ಗೆಯೂ ಗೌರವ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು. ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಯಾದಗಿರಿ ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಕೋಟೆ ಸೇರಿದಂತೆ ವಾಲ್ಮೀಕಿ ವೃತ್ತ,…

  • ಕಿಲ್ಲನಕೇರಾದಲ್ಲಿ ಕಮಲಮ್ಮ ಅವರ ಶತಮಾನೋತ್ಸವ: 100ನೇ ಹುಟ್ಟುಹಬ್ಬ ಆಚರಣೆ

    ಕಿಲ್ಲನಕೇರಾದಲ್ಲಿ ಕಮಲಮ್ಮ ಅವರ ಶತಮಾನೋತ್ಸವ: 100ನೇ ಹುಟ್ಟುಹಬ್ಬ ಆಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನೂರು ವರ್ಷ ಎನ್ನುವುದು ಕೇವಲ ಒಂದು ಸಂಖ್ಯೆ ಅಲ್ಲ; ಅದು ಬದುಕಿನ ನೂರಾರು ನೆನಪುಗಳು, ಸಾವಿರಾರು ಅನುಭವಗಳು, ಕಷ್ಟ–ಸುಖಗಳ ಪಯಣ ಹಾಗೂ ಹಲವು ತಲೆಮಾರುಗಳನ್ನು ಕಣ್ಣಾರೆ ಕಂಡ ಅಪರೂಪದ ಜೀವನಗಾಥೆ. ಇಂತಹ ಸಾರ್ಥಕ ಬದುಕಿನ ಶತಮಾನೋತ್ಸವಕ್ಕೆ ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದ ಶ್ರೀಮತಿ ಕಮಲಮ್ಮ ಗಂಡ ಯಲ್ಲಪ್ಪ ಹಡಪದ ಅವರು ಸಾಕ್ಷಿಯಾಗಿದ್ದು, ಅವರ 100ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬಸ್ಥರು ಪ್ರೀತಿ–ಸಂಭ್ರಮದಿಂದ ಆಚರಿಸಿದರು. ಬದುಕಿನ ಶತಮಾನವನ್ನು ಪೂರೈಸಿದ ಕಮಲಮ್ಮ ಅವರ ಸುತ್ತ ಮಕ್ಕಳು,…

  • ಯಾದಗಿರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ: ಆಯುಷ್ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಒತ್ತು

    ಯಾದಗಿರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ: ಆಯುಷ್ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಒತ್ತು

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ದೇಶದಲ್ಲಿ ಆಯುರ್ವೇದ ಮೂಲ ಚಿಕಿತ್ಸಾ ಪದ್ದತಿಯಾಗಿದೆ, ಅದರ ಲಾಭಗಳು ಹೆಚ್ಚು, ಅದರ ಸೇವೆಗಳು ಜಿಲ್ಲೆಯ ಜನರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಿಗಬೇಕು, ಆ ದಿಶೆಯಲ್ಲಿ ಬಹಳ ವರ್ಷದಿಂದ ನೆನೆಗುದಿಗೆ ಬಿದ್ದಿರುವ ಆಯುಷ್ ಜಿಲ್ಲಾಸ್ಪತ್ರೆ ನಿರ್ಮಾಣ ಯೋಜನೆಗೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಅನುಷ್ಟಾನಕ್ಕೆ ಗಮನ ಹರಿಸುತ್ತೇವೆ ಎಂದು ನಗರಾಭಿವೃದ್ಧಿ ಅಧ್ಯಕ್ಷ ಬಾಬುರಾವ್ ಕಾಡ್ಲೂರ ಹೇಳಿದರು, ನಗರದ ಹೊರವಲಯದಲ್ಲಿರುವ ನಿವೇದಿತಾ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಆಯುಷ್ ಇಲಾಖೆಯಿಂದ ಹಮ್ಮಿಕೊಂಡಿದ್ದ…

  • ಹತ್ತಿಕುಣಿ ಸಹಕಾರ ಸಂಘದಿಂದ ರೈತರಿಗೆ ₹2.28 ಕೋಟಿ ಬೆಳೆ ಸಾಲ: ₹7 ಲಕ್ಷ ಲಾಭ

    ಹತ್ತಿಕುಣಿ ಸಹಕಾರ ಸಂಘದಿಂದ ರೈತರಿಗೆ ₹2.28 ಕೋಟಿ ಬೆಳೆ ಸಾಲ: ₹7 ಲಕ್ಷ ಲಾಭ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ದೇಶ ಕೃಷಿ ಪ್ರಧಾನವಾದ ದೇಶ, ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವಿದೆ, ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆಯಾ ವ್ಯಾಪ್ತಿಯಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ಅವರ ಜೀವನಾಡಿಯಾಗಿವೆ ಎಂದು ಸಹಕಾರ ಸಂಘದ ಅಧ್ಯಕ್ಷ ಶರಣಪ್ಪಗೌಡ ಮಾಲಿ ಪಾಟೀಲ್ ಹೇಳಿದರು. ತಾಲ್ಲೂಕಿನ ಹತ್ತಿಕುಣಿ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ೧೧ಕ್ಕೆ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ…

  • ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ಜೀವನದ ಅಮೂಲ್ಯ ಕ್ಷಣಗಳನ್ನು ಸದಾ ನೆನಪಿನಲ್ಲಿ ಉಳಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ವದ್ದಾಗಿದೆ ಎಂದು ಯುವ ಮುಖಂಡ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಗೌಡ ಮುದ್ನಾಳ ಹೇಳಿದರು. ಯಾದಗಿರಿ ಜಿಲ್ಲಾ ಹಾಗೂ ವಲಯ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ 187ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಛಾಯಾಚಿತ್ರಗಳ ಮೂಲಕ ನಮ್ಮ ಜೀವನದ ಅಮೂಲ್ಯ ಕ್ಷಣಗಳು ಹಾಗೂ…

  • ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

    ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಪ್ರಮುಖ ಜನಸಂದಣಿ ಪ್ರದೇಶವಾಗಿರುವ ಹತಿಕುಣಿ ಕ್ರಾಸ್‌ ರಸ್ತೆಯನ್ನು ಅಗಲೀಕರಣಗೊಳಿಸುವ ಕಾಮಗಾರಿಗೆ ಜಿಲ್ಲಾಡಳಿತ ಮುಂದಾಗಿದ್ದು, ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾದಗಿರಿ ತಾಲೂಕು ಹಾಗೂ ಸೇಡಂ ಭಾಗಗಳಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಕೆಲಸಗಳಿಗಾಗಿ ನಗರಕ್ಕೆ ಆಗಮಿಸುತ್ತಿದ್ದು, ಹತಿಕುಣಿ ಕ್ರಾಸ್‌ ಮಾರ್ಗದಲ್ಲಿ ವಾಹನಗಳ ಸಂಚಾರವೂ ಹೆಚ್ಚಾಗಿದೆ. ರಸ್ತೆ ಬದಿಯ ಜಾಗಗಳಲ್ಲಿ ಹಲವು ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು,…

  • ಮೈಲಾಪುರ ಹೊನ್ನಕೇರಿಯಲ್ಲಿ ವ್ಯಕ್ತಿ ಮುಳುಗಿ ಸಾವು: ಯಾದಗಿರಿ

    ಮೈಲಾಪುರ ಹೊನ್ನಕೇರಿಯಲ್ಲಿ ವ್ಯಕ್ತಿ ಮುಳುಗಿ ಸಾವು: ಯಾದಗಿರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲ್ಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೈಲಾಪುರದ ಮಲ್ಲಯ್ಯನ ದರ್ಶನಕ್ಕೆ ಕುಟುಂಬ ಸಮೇತ ಆಗಮಿಸಿದ್ದ ವ್ಯಕ್ತಿಯೊಬ್ಬರು ಹೊನ್ನಕೇರಿಯಲ್ಲಿ ಸ್ನಾನಕ್ಕೆ ಇಳಿದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ತೆಲಂಗಾಣ ರಾಜ್ಯದ ತಾಂಡೂರು ಮೂಲದ ಲಾಲಪ್ಪ ತಂದೆ ಬೂಗಪ್ಪ (45) ಮೃತಪಟ್ಟವರು. ಭಾನುವಾರ ವಿಶೇಷ ದಿನವಾಗಿದ್ದರಿಂದ ಮೈಲಾಪುರ ಮಲ್ಲಯ್ಯನ ದರ್ಶನಕ್ಕೆ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಭಕ್ತರು ಮಲ್ಲಯ್ಯನ ದರ್ಶನ ಪಡೆಯುವ…

↑
Suddi Belaku