
ಸುದ್ದಿ ಬೆಳಕು ವಾರ್ತೆ
ಹುಣಸಗಿ : ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿಯೋಜನೆ ಗ್ರಾಮೀಣಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಾಲೂಕು ಪಂಚಾಯತ್ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಮಾಲೋಚಕ ಮಲ್ಲಿಕಾರ್ಜುನ ಹೇಳಿದರು.
ತಾಲೂಕಿನ ಬೈಲಕುಂಟಿ, ಗೆದ್ದಲಮರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ ಗಳಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಜನ ಜಾಗೃತಿ ಅಭಿಯಾನದಡಿ ಮಾತನಾಡಿದ ಅವರು, ಯೋಜನೆಯಡಿ ದಿನಗೂಲಿ ಮೊತ್ತವನ್ನು ರೂ.370ರಿಂದ ರೂ.382ಕ್ಕೆ ಹೆಚ್ಚಿಸಲಾಗಿದೆ. ವಾರ್ಷಿಕ ಉದ್ಯೋಗಾವಕಾಶವನ್ನು 100 ದಿನಗಳಿಂದ 125 ದಿನಗಳಿಗೆ ವಿಸ್ತರಿಸಲಾಗಿದ್ದು, ಗ್ರಾಮೀಣ್ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ಹೊಂದಿರುವ ಕುಟುಂಬವು ವರ್ಷಕ್ಕೆ ರೂ.47,750ರವರೆಗೆ ಆದಾಯ ಗಳಿಸಲು ಅವಕಾಶ ಕಲ್ಪಿಸಲಾಗಿದೆ
ಎಂದು ಮಾಹಿತಿ ನೀಡಿದರು.
ತಾಲೂಕು ಪಂಚಾಯತ ವಿಬಿಜಿ ರಾಮ್ ಜಿ ಯೋಜನೆಯಡಿ 318 ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿದ್ದು, ಪ್ರತಿಯೊಂದು ಅರ್ಹ ಕುಟುಂಬವೂ ಜಾಬ್ ಕಾರ್ಡ್ ಗಳನ್ನು ಹೊಂದಿಬೇಕು ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಿ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆಯಬೇಕು. ಗ್ರಾಮಗಳಲ್ಲಿ ಹೆಚ್ಚಿನ ವೈಯಕ್ತಿಕ ಹಾಗೂ ಸಮುದಾಯ
ಕಾಮಗಾರಿಗಳನ್ನು ಆರಂಭಿಸುವ ಮೂಲಕ ಉದ್ಯೋಗಸೃಷ್ಟಿ ಹೆಚ್ಚಿಸಿ, ಕುಟುಂಬಗಳ ಆರ್ಥಿಕ ಪ್ರಗತಿಗೂ ಒತ್ತು ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಸೋಮಶೇಖರ್ ಸಿಂಪಿ,ಮತ್ತು ಮಲ್ಲಣ್ಣ ಗೌಡ ಕಾರ್ಯದರ್ಶಿ ಈರಣ್ಣ ಗೌಡ ಹೊಸಮನಿ,ಅವರು ಗ್ರಾಮ ಕಾಯಕ ಮಿತ್ರ ರೇಣುಕಾ, ಲಕ್ಷ್ಮಿ ಬಾಯಿ,ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಕೂಲಿಕಾರ್ಮಿಕರು ಗ್ರಾಮಸ್ಥರು ಇದ್ದರು.











Leave a Reply