ವಡಗೇರಾ ಪೊಲೀಸ್ ಠಾಣೆಗೆ ನೂತನ ಪಿಎಸ್‌ಐ ಅಯ್ಯಪ್ಪ ಅಧಿಕಾರ ಸ್ವೀಕಾರ

Posted by

–

ಸುದ್ದಿ ಬೆಳಕು ವಾರ್ತೆ

ವಡಗೇರಾ : ಪಟ್ಟಣದ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಅಯ್ಯಪ್ಪ ರವರು ಮಂಗಳವಾರ ದಂದು ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ ವಹಿಸಿಕೊಂಡು ಅವರು ಮಾತನಾಡಿದರು.ಈ ಮೊದಲು ನಾನು ಗೋಗಿ, ನಾರಾಯಣಪುರ ಸೇರಿದಂತೆ ಇನ್ನಿತರ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಈಗ ವರ್ಗಾವಣೆ ಮೂಲಕ ವಡಗೇರಾ ಪೊಲೀಸ್ ಠಾಣೆಗೆ ಬಂದಿದ್ದು ತಾಲೂಕಿನಲ್ಲಿ ಶಾಂತಿಸುವವಸ್ಥೆ ಕಾಪಾಡುವುದರ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ನ್ಯಾಯ ಒದಗಿಸುವ ಕೆಲಸ ಮಾಡುವೆ ಸಾರ್ವಜನಿಕರು ತಮ್ಮ ಕುಂದು ಕೊರತೆ ಸಮಸ್ಯೆಗಳಿದ್ದರೆ ನಿರ್ಭಯವಾಗಿ ಠಾಣಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಜನಸ್ನೇಹಿ ಅಧಿಕಾರಿಯಾಗಿ ನಾನು ಕಾರ್ಯನಿರ್ವಸುವುದಾಗಿ ತಿಳಿಸಿದರು.

ನಮ್ಮ ಸಿಬ್ಬಂದಿಗಳು ಕೂಡಾ ಸಾರ್ವಜನಿಕರೊಂದಿಗೆ ಜನಸ್ನೇಹಿ ಪೊಲೀಸರಾಗಿ ನೆಡೆದುಕೊಳ್ಳುವಂತೆ ಸಲಹೆ ನೀಡಿದ್ದೇನೆ ಉತ್ತಮ ಆಡಳಿತ ನಡೆಸಲು ಸಾರ್ವಜನಿಕರು ಸಂಘ-ಸಂಸ್ಥೆಗಳ ಸಹಕಾರದ ಅವಶ್ಯ ಎಂದು ಹೇಳಿದರು.ಇದೇ ಸಮಯದಲ್ಲಿ ಠಾಣೆ ಸಿಬ್ಬಂದಿಗಳು ಸನ್ಮಾನಿಸಿ ಸ್ವಾಗತಿಸಿಕೊಂಡರು.

ಈ ಸಂದರ್ಭದಲ್ಲಿ ಪಟ್ಟಣದ ಮುಖಂಡರು ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

↑
Suddi Belaku