
ಸುದ್ದಿ ಬೆಳಕು ವಾರ್ತೆ
ಯಾದಗಿರಿ : ನಗರದ ನೀರು ಶುದ್ಧೀಕರಣ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮೇ 6 ಮತ್ತು 7ರಂದು ನಗರಾದ್ಯಂತ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪೌರಾಯುಕ್ತರಾದ ಉಮೇಶ ಚವ್ಹಾಣ ತಿಳಿಸಿದ್ದಾರೆ.
ನೀರು ಶುದ್ಧೀಕರಣ ಘಟಕದಲ್ಲಿರುವ ಮೋಟಾರ್‌ನ ‘ಫುಟ್‌ಬಾಲ್’ (Foot valve) ದುರಸ್ತಿಯಲ್ಲಿದ್ದು, ಅದನ್ನು ಸರಿಪಡಿಸುವುದು ಅತ್ಯಗತ್ಯವಾಗಿದೆ. ಈ ತುರ್ತು ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ದಿನಾಂಕ 06-05-2026 (ಬುಧವಾರ), ದಿನಾಂಕ: 07-05-2026 (ಗುರುವಾರ) ದುರಸ್ತಿ ಕಾರ್ಯದ ಅವಧಿಯಲ್ಲಿ ನೀರಿನ ಲಭ್ಯತೆ ಇರುವುದಿಲ್ಲವಾದ್ದರಿಂದ, ಯಾದಗಿರಿ ನಗರದ ಸಾರ್ವಜನಿಕರು ಲಭ್ಯವಿರುವ ನೀರನ್ನು ಮಿತವಾಗಿ ಬಳಸಬೇಕು. ನಗರಸಭೆಯ ಈ ತಾಂತ್ರಿಕ ಅನಿವಾರ್ಯತೆಗೆ ಸಾರ್ವಜನಿಕರು ಸಹಕರಿಸಬೇಕೆಂದು ಪೌರಾಯುಕ್ತರಾದ ಉಮೇಶ ಚವ್ಹಾಣ ಅವರು ಪ್ರಕಟಣೆಯ ಮೂಲಕ ಕೋರಿದ್ದಾರೆ.










Leave a Reply