
ಸುದ್ದಿ ಬೆಳಕು ವಾರ್ತೆ
ಶಹಾಪುರ , ಏಪ್ರಿಲ್ 17 : ಮಹಿಳೆಯರು ಕೇವಲ ಕುಟುಂಬದ ಬೆನ್ನೆಲುಬಲ್ಲ, ಸಮಾಜ ಹಾಗೂ ದೇಶದ ಅಭಿವೃದ್ಧಿಯ ಚಾಲಕ ಶಕ್ತಿಯಾಗಿದ್ದಾರೆ. ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಇನ್ನಷ್ಟು ಸಬಲೀಕರಣ ಹೊಂದಿದರೆ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ರಾಷ್ಟಿçÃಯ ಪಂಚಾಯತ ರಾಜ್ ದಿವಸ ಅಂಗವಾಗಿ ಶಹಾಪುರ ತಾಲೂಕ ಪಂಚಾಯಿತಿ ವತಿಯಿಂದ ಏಪ್ರಿಲ್ ೨೪ ರಂದು ಶಹಾಪುರ ತಾಲೂಕ ಪಂಚಾಯತ ಸಭಾಂಗಣದಲ್ಲಿ ಹಮ್ಮಿಕೊಂಡ ಮಹಿಳಾ ಸಾಧಕಿಯರ ಅಭಿನಂದನೆ ಹಾಗೂ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಸಸಿಗೆ ನೀರುಣ್ಣಿಸುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ಏ.೨೩ರಂದು ಬಿಡುಗಡೆಯಾದ ೧೦ನೇ ತರಗತಿ ಫಲಿತಾಂಶದಲ್ಲಿ ವಿದ್ಯಾರ್ಥಿನಿಯೊಬ್ಬರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಅಲ್ಲದೇ ಮಹಿಳೆಯರು ಸಾಧನೆಯಲ್ಲಿ ಮುಂದಿರುವದು ಬದಲಾವಣೆ ಹಾಗೂ ಪ್ರಗತಿಯ ಸಂಖ್ಯೆತವಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರಗೆ ಹೆಚ್ಚಿನ ಆಧ್ಯತೆ ನೀಡಿ, ಸರಕಾರದ ಪ್ರತಿಯೊಂದು ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಾಗುತ್ತಿದೆ ಎಂದು ಹೇಳಿದರು.
ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಬಸವರಾಜ ಶರಭೈ ಅವರು ಮಾತನಾಡಿ, ಪ್ರತಿಯೊಬ್ಬ ಸಾಧಕ ವ್ಯಕ್ತಿಗಳ ಹಿಂದೆ ಚಾಲಕ ಶಕ್ತಿಯಾಗಿ ಮಹಿಳೆಯರು ಇರುತ್ತಾರೆ. ಇತ್ತೀಚೆಗೆ ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ಪರೀಕ್ಷೆಯಲ್ಲಿ ಜಿಲ್ಲೆಯಿಂದ ಆಯ್ಕೆಯಾದ ನಾಲ್ಕು ಜನರ ಹಿಂದೆ ಪ್ರೇರಕ ಶಕ್ತಿಯಾಗಿ ನಿಂತಿದ್ದು, ಅವರ ಕುಟುಂಬ ಎಂಬುದನ್ನು ಸ್ಮರಿಸಬೇಕಾಗುತ್ತದೆ ಎಂದರು.
ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಡಾ. ಶಂಕ್ರಮ್ಮ ಪಾಟೀಲ ಅವರು ಮಾತನಾಡಿ, ಸಮಾಜದ ಅರ್ಧ ಭಾಗವಾಗಿರುವ ಮಹಿಳೆಯರು ಶಿಕ್ಷಣ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಮುನ್ನಡೆದಾಗ ಮಾತ್ರ ರಾಷ್ಟ್ರದ ನಿಜವಾದ ಅಭಿವೃದ್ಧಿ ಸಾಧ್ಯ. ಮಹಿಳೆ ಮನೆಯ ಚೌಕಟ್ಟನ್ನು ದಾಟಿ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸುತ್ತಿದ್ದಾಳೆ ಎಂದು ಹೇಳಿದರು.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯಿತಿ ಹಾಗೂ ತಾಲೂಕ ಪಂಚಾಯಿತಿ ಮಹಿಳಾ ಸಿಬ್ಬಂದಿಗಾಗಿ ಹಮ್ಮಿಕೊಂಡ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ, ವಿಜೇತರಾದ ಮಹಿಳೆಯರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಸರಕಾರಿ ಸೇವೆಯಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ ತಾಲೂಕ ಪಂಚಾಯತ ಹಾಗೂ ಗ್ರಾಮ ಪಂಚಾಯತ ಮಹಿಳಾ ಅಧಿಕಾರಿ, ಸಿಬ್ಬಂದಿಗಳಿಗೆ ಉತ್ತಮ ಸೇವಾ ಪ್ರಶಸ್ತಿ ನೀಡಿ, ಗೌರವಿಸಲಾಯಿತು ಹಾಗೂ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಬ್ಯಾರ್ಥಿಗಳ ತಾಯಂದಿರಿಗೆ ಸನ್ಮಾನಿಸುವ ಮೂಲಕ ಅಭಿನಂದಿಸಲಾಯಿತು.
ಈ ವೇಳೆ ಶಹಾಪುರ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಬಸವರಾಜ ಶರಭೈ, ರಾಜ್ಯ ಸರಕಾರಿ ನೌಕರರ ಸಂಘದ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ರಾಯಪ್ಪಗೌಡ ಹುಡೇದ್, ಸಹಾಯಕ ನಿರ್ದೇಶಕರಾದ ಶ್ರೀಮತಿ ಅಕ್ಕನಾಗಮ್ಮ, ತಾಲೂಕ ಯೋಜನಾಧಿಕಾರಿ ಶ್ರೀಮತಿ ಶಾರದಮ್ಮ ನಾಗ್ಲೋಟ್, ಯಾದಗಿರಿ ಜಿಲ್ಲೆಯಿಂದ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ತಾಯಂದಿರು ಸೇರಿದಂತೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕ ಪಂಚಾಯತ ಸಿಬ್ಬಂದಿ ಇದ್ದರು.










Leave a Reply