
ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಬೆಂಗಳೂರುದಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಯಿಂದ ಎರಡೂ ವಾಹನಗಳಿಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಹಾಗೂ ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಕಲೆಹಾಕುವ ಕಾರ್ಯ ಮುಂದುವರಿದಿದೆ.
ಈ ದಾರುಣ ಘಟನೆ ಪ್ರದೇಶದಲ್ಲಿ ಆತಂಕ ಮತ್ತು ಶೋಕ ವಾತಾವರಣವನ್ನು ಮೂಡಿಸಿದೆ.










Leave a Reply