ಸುದ್ದಿ ಬೆಳಕು ವಾರ್ತೆ
ಯಾದಗಿರಿ : ಜಿಲ್ಲಾ ಕೇಂದ್ರವೂ ಪ್ರತಿ ವರ್ಷ ವಿಸ್ತಾರವಾಗುತ್ತಿದೆ, ಇಲ್ಲಿನ ಜನರ ಬೇಡಿಕೆಯಂತೆ ನಗರದ ಎಲ್ಲಾ ವಾರ್ಡ್ಗಳಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು.
ನಗರದ ವಾರ್ಡ್ ಸಂಖ್ಯೆ. ೨೨ರ ವೀರಶೈವ ಕಲ್ಯಾಣ ಮಂಟಪದ ಹತ್ತಿರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಟಿಎಸ್‌ಪಿ) ಯೋಜನೆಯಡಿಯಲ್ಲಿ ನಿರ್ಮಿತಿ ಕೇಂದ್ರದಿAದ ಅಂದಾಜು ೨೫ ಲಕ್ಷ ರೂ, ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು.
ಕಳೆದ ೩ ವರ್ಷಗಳಲ್ಲಿ ನಗರದಲ್ಲಿ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಲವಾರು ಮಹತ್ವದ ಪ್ರಗತಿ ಕಾಮಗಾರಿಗಳನ್ನು ಕೈಗೊಂಡು ಬದಲಾವಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ, ಇನ್ನೂ ಮಾಡಬೇಕಾದ ಕೆಲಸ ಬಹಳಷ್ಟಿದೆ, ಬರುವ ದಿನಗಳಲ್ಲಿ ಸರ್ಕಾರದಿಂದ ವಿವಿಧ ಇಲಾಖೆಗಳಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶದ ಭಾಗಗಳಲ್ಲಿ ಜನಪರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರದ ಹಲವಾರು ವಾರ್ಡ್ಗಳಲ್ಲಿ ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗುತ್ತಿದೆ, ಸಮಸ್ಯೆಗೆ ಶಾಶ್ವತ ಒದಗಿಸಲು ಸರ್ಕಾರ ಈಗಾಗಲೇ ಒಳಚರಂಡಿ ಕಾಮಗಾರಿ ಕೈಗೊಳ್ಳಲು ೫೫ ಕೋಟಿ ರೂ. ವಿವಿಧ ವಾರ್ಡ್ಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ, ಬರುವ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಮಾಹಿತಿ ನೀಡಿದರು,
ನಗರದ ಜನರ ಬಹುದಿನದ ಬೇಡಿಕೆಯಾದ ಭೀಮಾನದಿಯಿಂದ ಶುದ್ಧ ಕುಡಿಯುವ ನೀರಿನ ಪೂರೈಕೆ ಯೋಜನೆ ಕೆಲ ತಾಂತ್ರಿಕ ಕಾರಣಗಳಿಂದ ಮಂದಗತಿಯಲ್ಲಿ ಸಾಗುತ್ತಿದೆ, ನಾನು ಕೂಡ ಸಂಬAಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಕಾಮಗಾರಿ ವೇಗ ಹೆಚ್ಚಿಸಲು ಸೂಚಿಸಿದ್ದೇನೆ ಎಂದರು.
ಈಗಾಗಲೇ ರಾಜ್ಯ ಸರ್ಕಾರ ಕಳೆದ ೩ ವರ್ಷಗಳಿಂದ ಉತ್ತಮ ಆಡಳಿತ ನೀಡುವ ಜೊತೆಗೆ ನುಡಿದಂತೆ ಜನರಿಗೆ ಪಂಚ ಗ್ಯಾರಂಟಿಗಳ ಯೋಜನೆಗಳ ಲಾಭ ನೇರವಾಗಿ ತಲುಪಿಸುತ್ತಿದೆ, ಗ್ರಾಮೀಣ ಭಾಗದಿಂದ ನಾನು ಬಂದಿದ್ದೇನೆ, ಅಲ್ಲಿನ ಜನರ ಸಮಸ್ಯೆಗಳ ಅರಿವು ನನಗಿದೆ, ಜನರ ಬೇಡಿಕೆಯಂತೆ ಹಂತ-ಹAತವಾಗಿ ಅಗತ್ಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದ್ಯತೆ ನೀಡಲಾಗುವುದು ಎಂದರು,
ಯಾವುದೇ ಇಲಾಖೆ ಕಾಮಗಾರಿಯಾಗಲೀ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದಿಂದ ಕೈಗೊಳ್ಳಲು ನಾನು ಸದಾ ಎಚ್ಚರಿಸುತ್ತೇನೆ, ಹಲವಾರು ಸಂದರ್ಭಗಳಲ್ಲಿ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ, ಖುದ್ದಾಗಿ ಪರಿಶೀಲನೆ ಮಾಡುತ್ತಿದ್ದೇನೆ, ಈ ನಿಟ್ಟಿನಲ್ಲಿ ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅರಿತು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡಬೇಕೆಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಿದ್ದಯ್ಯಸ್ವಾಮಿ ಹಿರೇಮಠ, ನಿರ್ಮಿತಿ ಕೇಂದ್ರದ ಸಹಾಯಕ ಇಂಜಿನಿಯರ್ ರವಿಕುಮಾರ ಕಂದಕೂರ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಮುಖಂಡರಾದ ನಿಂಗಪ್ಪ ಜಾಲಗಾರ, ಚಂದ್ರಕಾAತ ಮುನಿಯಪ್ಪನೋರ್, ವಿಶ್ವನಾಥ ನಾಯಕ, ಶಿವು ಬೆಳಗುಂದಿ, ತಿಮ್ಮಣ್ಣ ನಾಯಕ, ಬೀರಲಿಂಗ ಪೂಜಾರಿ, ಶಿವು ಕಂದಳ್ಳಿ, ರೀಯಾನ್ ಅಲಿ ತುಮಕೂರ, ಫಯಾಜ್ ಮುಲ್ಲಾ, ಸಾಯಿಬಣ್ಣ ಬಾಡಿಯಾಳ, ಮಲ್ಲಯ್ಯ ಕಸಬಿ, ವೆಂಕಟೇಶ ನಾಗುಂಡಿ, ಶಂಕರ್ ಸೋನಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು,











Leave a Reply