ಯಾದಗಿರಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯ ಭಾಗವಾಗಿ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿಯೂ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
ನಗರದ ಸುಭಾಷ್ ಚಂದ್ರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎಸ್‌ಐಆರ್ ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮತದಾರರ ಪಟ್ಟಿಗೆ ಸಂಬಂಧಿಸಿದ ಎಸ್‌ಐಆರ್ ಪ್ರಕ್ರಿಯೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಸರ್ಕಾರ ಮತ್ತು ಚುನಾವಣಾ ಆಯೋಗ ಗಮನಹರಿಸಬೇಕು ಎಂದು ಮುಖಂಡರು ಒತ್ತಾಯಿಸಿದರು.














Leave a Reply