
ಸುದ್ದಿ ಬೆಳಕು ವಾರ್ತೆ
ಯಾದಗಿರಿ : ರಾಜ್ಯ ಸರ್ಕಾರವು ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಪಾಂಡ್ವೆ ರಾಹುಲ್ ತುಕಾರಾಂ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಪ್ರಕಟವಾಗಿದ್ದು, ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತ ವಿಭಾಗದ ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವೀಸಸ್ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು ಅಧಿಸೂಚನೆ ಹೊರಡಿಸಿದೆ.












Leave a Reply