ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ದರ್ಶನಾಪೂರ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ನಗರದಲ್ಲಿ ನಿರ್ಮಾಣ ಮಾಡುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಕಛೇರಿ ಕಟ್ಟಡ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಳ್ಳಿ ಅಂದಾಗ ಮಾತ್ರ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪ ದರ್ಶನಾಪೂರ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ೧.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ನೂತನ ಕಛೇರಿಯ ಕಟ್ಟಡ ಕಾಮಗಾರಿಯನ್ನು ವಿಕ್ಷೀಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ, ಇಂಜಿನಿಯರ್ ಹಾಗೂ ಗುತ್ತಿಗೆದಾರರ ಜೊತೆಗೆ ಚರ್ಚಿಸಿದ ಅವರು, ಕಟ್ಟಡ ಅಚ್ಚುಕಟ್ಟಾಗಿ ನಿರ್ಮಾಣ ಮಾಡಲು ಇನ್ನೂ ಅನುದಾದ ಅವಶ್ಯಕತೆ ಇದ್ದರೆ ಒದಗಿಸಲಾಗುವುದು, ಸುಸಜ್ಜಿತ ಕಟ್ಟಡ ನಿರ್ಮಾಣವಾಗಬೇಕೆಂಬುದು ಎಲ್ಲರ ಆಶಯವಾಗಿದೆ ಎಂದು ತಿಳಿಸಿ, ಕೆಲವು ಮಾರ್ಪಾಡುಗಳನ್ನು ಮಾಡಲು ಸೂಚಿಸಿದರು.
ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಎಲ್ಲಾ ಭಾಗದಲ್ಲಿ ಕಛೇರಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ, ಶಹಾಪೂರ ನಿರ್ಮಾಣ ಮಾಡುತ್ತಿರುವ ಕಛೇರಿ ಕಟ್ಟಡ ಜನೇವರಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ, ಪ್ರಧಾನ ಕಾರ್ಯದರ್ಶಿ ಬಸ್ಸುಗೌಡ ಬಿಳ್ಹಾರ, ವಕ್ತಾರ ಶಾಮಸನ್ ಮಾಳಿಕೇರಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಮುಖಂಡರಾದ ಸಿದ್ಲಿಂಗರಡ್ಡಿ ಉಳ್ಳೆಸೂಗೂರ, ಶರಣಪ್ಪ ಶೆಟ್ಟಿಗೇರಾ, ಭೀಮರಾಯ ಠಾಣಾಗುಂದಿ, ತಾಯಪ್ಪ ಯಾದವ, ಸಾಯಿಬಣ್ಣ ಬಾಡಿಯಾಳ, ಬಂದಪ್ಪಗೌಡ ಲಿಂಗೇರಿ, ಶಿವು ಬೆಳಗುಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

You Might Also Like

Leave a Reply

Your email address will not be published. Required fields are marked *

Suddi Belaku