ಯಾದಗಿರಿಯಲ್ಲಿ ಜಿಲ್ಲಾಡಳಿತದಿಂದ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Posted by

–

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು.

ಮಹಾತ್ಮ ಗಾಂಧೀಜಿ ಅವರ ಸತ್ಯ, ಅಹಿಂಸೆ, ಶಾಂತಿ ಮೂಲ ತತ್ವಾದರ್ಶಗಳನ್ನು ತಮ್ಮ ನಿಜ ಜೀವನದಲ್ಲಿ ಪರಿ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ, ಅಪರ್ ಜಿಲ್ಲಾಧಿಕಾರಿ ಶ್ರೀ ರಮೇಶ್ ಕೋಲಾರ, ಅವರು ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ,ಗೌರವ ಅರ್ಪಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು (ಪ್ರ), ಧರ್ಮದತ್ತಿ ಇಲಾಖೆ ಅಧಿಕಾರಿ ವಿಶ್ವನಾಥ, ಶಿರಸ್ತೆದಾರರಾದ ರೇಖಾ ದಿಕ್ಷೀತ್, ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ವಿಕ್ರಮ್ ರಾಠೋಢ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಸಿಬ್ಬಂದಿಗಳು, ಇದ್ದರು.

Leave a Reply

Your email address will not be published. Required fields are marked *

↑
Suddi Belaku