ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಮನವಿ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವೈನ್ ಶಾಪ್‌ಗಳು ಹಾಗೂ ಬಾರ್‌ಗಳಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಜಿಲ್ಲಾ ಘಟಕದಿಂದ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತಾನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಪೋಲಪ್ಪ ಎಂ. ನಾರಾಯಣೋರ್ ಅವರು ಯಾದಗಿರಿ ಅಬಕಾರಿ ಉಪ ಆಯುಕ್ತರಿಗೆ ಸಲ್ಲಿಸಿ ಮಾತಾನಾಡಿದ ಅವರು ಕೆಲವು ವೈನ್ ಶಾಪ್‌ಗಳು ಮತ್ತು ಬಾರ್‌ಗಳಿಂದ ಟಂಟಂ ವಾಹನಗಳು, ದ್ವಿಚಕ್ರ ವಾಹನಗಳು ಸೇರಿದಂತೆ ವಿವಿಧ ವಾಹನಗಳ ಮೂಲಕ ಗ್ರಾಮೀಣ ಭಾಗಗಳಿಗೆ ಅಕ್ರಮವಾಗಿ ಮದ್ಯ ಸಾಗಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಗ್ರಾಮಗಳಲ್ಲಿನ ಹೋಟೆಲ್‌ಗಳು, ಅಂಗಡಿಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವುದರಿಂದ ಸಾರ್ವಜನಿಕರ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮದ್ಯದ ದುಶ್ಚಟದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದು, ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ. ಯುವಕರು ಹಾಗೂ ಮಕ್ಕಳು ಕೂಡ ದುಶ್ಚಟಕ್ಕೆ ಒಳಗಾಗುವ ಅಪಾಯ ಹೆಚ್ಚಾಗಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಮದ್ಯ ಸೇವಿಸಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆದ್ದರಿಂದ ಅಕ್ರಮ ಮದ್ಯ ಮಾರಾಟ ಮತ್ತು ಸಾಗಾಟಕ್ಕೆ ಕಡಿವಾಣ ಹಾಕಬೇಕು. ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ವೈನ್ ಶಾಪ್‌ಗಳು ಹಾಗೂ ಬಾರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅಗತ್ಯವಿದ್ದಲ್ಲಿ ಪರವಾನಿಗೆ ರದ್ದುಪಡಿಸಬೇಕು ಎಂದು ಸಂಘವು ಆಗ್ರಹಿಸಿದರು.

ಅಬಕಾರಿ ಇಲಾಖೆ ಈ ಕುರಿತು ಕ್ರಮ ಕೈಗೊಳ್ಳದಿದ್ದರೆ, ಅಕ್ರಮ ಮದ್ಯ ಸಾಗಾಟ ಮಾಡುವ ವಾಹನಗಳ ಜಿ.ಪಿ.ಎಸ್. ಮಾಹಿತಿ ಸೇರಿದಂತೆ ದಾಖಲೆಗಳೊಂದಿಗೆ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹುಲಿಬೆಟ್ಟ ಯಾದಗಿರಿ ತಾಲೂಕ ನೂತನ ಅಧ್ಯಕ್ಷ ಭೀಮರಾಯ ಬಾವುರ್ ಮಲ್ಲಿಕಾರ್ಜುನ ಮುಷ್ಟುರ, ಚಂದ್ರಶೇಖರ್ ಎಚ್, ಲಕ್ಷ್ಮಣ ಹಡಪದ್, ಹಣಮಂತ ದಾಸರು, ಮಲ್ಲು ಟೈಲರ್, ಇದ್ದರು

Leave a Reply

Your email address will not be published. Required fields are marked *

Suddi Belaku