ಸಂಗೀತ, ಸಾಹಿತ್ಯ ಮತ್ತು ನೃತ್ಯ ಭಾರತೀಯ ಸಂಸ್ಕೃತಿಯ ಜೀವಾಳ: ಡಾ. ಸುಭಾಶ್ಚಂದ್ರ ಕೌಲಗಿ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಸಂಗೀತ, ಸಾಹಿತ್ಯ ಮತ್ತು ನೃತ್ಯ ಕಲೆ ತಲೆ ತಲಾಂತರಗಳಿAದ ಬಂದಿರುವ ಕಲೆಗಳಾಗಿದ್ದು, ರಾಜ ಪ್ರಭುತ್ವದಿಂದ ಪ್ರಜಾಪ್ರಭುತ್ವದೆಡೆಗೆ ಸಂಗೀತ ಕಲೆ ನಿರಂತರವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ ಎಂದು ಯಾದಗಿರಿ ಲೀಡ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಭಾಶ್ಚಂದ್ರ ಕೌಲಗಿ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವನಾಥರಡ್ಡಿ ಮುದ್ನಾಳ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಡಿಡಿಯು ಶಿಕ್ಷಣ ಸಂಸ್ಥೆ ಯಾದಗಿರಿ, ಸರ್ಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಚನ ವೈಭವ ಮತ್ತು ಸಂಗೀತ ನೃತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮನ ಬಡಿದೆಬ್ಬಿಸುವ ಕೆಲಸ ಸಂಗೀತ ಮಾಡುತ್ತದೆ, ವಚನ ಸಾಹಿತ್ಯದಿಂದ ಕನ್ನಡ ಸಾಹಿತ್ಯಕ್ಕೆ ಅತ್ಯಂತ ಅಮೂಲ್ಯ ಕೊಡುಗೆಯನ್ನು ವಚನಕಾರರು ನೀಡಿದ್ದಾರೆ. ನಾವು ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡೋಣ ಎಂದು ಹೇಳಿದರು.

ಸಂಗೀತ, ನೃತ್ಯ ಕಲೆಗಳು ಭಾರತೀಯ ಪರಂಪರೆಯನ್ನು ಉಳಿಸುವ ಕಲೆಗಳಾಗಿವೆ ಎಂದು ಅಭಿಪ್ರಾಯಪಟ್ಟರು.

೧೧ನೇ ಅಖೀಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷರಾದ ಜಯದೇವಿ ಗಾಯಕವಾಡ ಮಾತನಾಡಿ, ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ನೃತ್ಯ ಮತ್ತು ಸಂಗೀತದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂತಹ ಕಾರ್ಯಕ್ರಮಗಳು ಯುವ ಪ್ರತಿಭೆಗಳಿಗೆ ತಮ್ಮ ಕಲೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದ್ದು, ಕಲಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಸಹಕಾರಿಯಾಗಿವೆ ಎಂದು ಹೇಳಿದರು.

ಸಂಗೀತ ನೃತ್ಯ ಅಕಾಡೆಮಿಯ ರಾಜ್ಯಾಧ್ಯಕ್ಷರಾದ ಶುಭ ಧನಂಜಯ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಸ್ಥೆಯು ನಿರಂತರವಾಗಿ ನೃತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು.

ಅಕಾಡೆಮಿ ಸದಸ್ಯರಾದ ಪದಾ ದೇವರಾಜ ಮಾತನಾಡಿ, ಸಂಗೀತ ನೃತ್ಯ ಅಕಾಡೆಮಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಸಂಗೀತದಿAದ ಮಾನಸಿಕ ನೆಮ್ಮದಿ ಸಿಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲಾವಿದರಾದ ಬಸವರಾಜ ಭಂಟನೂರ ಸೇರಿದಂತೆ ಇತರರಿದ್ದರು.

ಜ್ಯೋತಿ ಪಾಟೀಲ ಪ್ರಾರ್ಥಿಸಿದರು, ಕಾಸೀಮ ಮಲ್ಲಿಗೆಮಡು ಸ್ವಾಗತಸಿದರು, ರಮೇಶ ಗೊಬ್ಬೂರ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಶಂಕ್ರಪ್ಪ ಹೂಗಾರ ವಂದಿಸಿದರು.

Leave a Reply

Your email address will not be published. Required fields are marked *

Suddi Belaku