ಯಾದಗಿರಿಯಲ್ಲಿ ಸೆ.17ರಂದು ವಿಶ್ವಕರ್ಮ ಜಯಂತ್ಯೋತ್ಸವ: ಸಿದ್ಧತೆ

Posted by

–

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೆ.17 ರಂದು ಮಧ್ಯಾಹ್ನ 2ಕ್ಕೆ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ನಡೆಯಲಿದೆ ಎಂದು ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠಾಧೀಶ ಹಾಗೂ ಯಾದಗಿರಿಯ ವಿಶ್ವಕರ್ಮ ಏಕದಂಡಗಿ ಮಠದ ಶ್ರೀ ರವೀಂದ್ರ ಸ್ವಾಮೀಜಿ ಹೇಳಿದರು.

ಶನಿವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಯ೯ಕ್ರಮಕ್ಕೂ ಮೊದಲಿಗೆ ವಿಶ್ವಕರ್ಮ ಚೌಕ್‌ನಿಂದ ಸರಕಾರಿ ಪದವಿ ಮಹಾವಿದ್ಯಾಲಯದವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಜಯಂತ್ಯೋತ್ಸವದಲ್ಲಿ ಸುಮಾರು 1,000ಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಕಾಯ೯ಕ್ರಮ ಉದ್ಘಾಟಿಸುವರು. ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅಧ್ಯಕ್ಷತೆ ವಹಿಸುವರು.
ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠಾಧೀಶ ಹಾಗೂ ಯಾದಗಿರಿಯ ವಿಶ್ವಕರ್ಮ ಏಕದಂಡಗಿ ಮಠದ ಪರಮಪೂಜ್ಯ ಶ್ರೀ ರವೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹಲವಾರು ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಹೇಳಿದರು.

ಭಗವಂತನ ದೇವತೆಗಳಿಗೆ ಶಿಲ್ಪಕಲೆ ಸೇರಿದಂತೆ ವಿವಿಧ ಕಲಾಕೃತಿಗಳನ್ನು ನಿರ್ಮಿಸಿದ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದರು.

ಪ್ರಕೃತಿಯಲ್ಲಿ ಅಡಗಿರುವ ಕಲೆಯನ್ನು ಶಿಲ್ಪಕಲೆಯ ಮೂಲಕ ಸುಂದರವಾಗಿ ರೂಪಿಸಿದ ವಿಶ್ವಕರ್ಮರ ಪರಂಪರೆ ಹಾಗೂ ಸಾಧನೆಗಳನ್ನು ಸ್ಮರಿಸುವುದು ಜಯಂತ್ಯೋತ್ಸವದ ಉದ್ದೇಶವಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವಕರ್ಮ ಏಕದಂಡಗಿ ಮಠದ ಶ್ರೀ ವಿಶ್ವಾಮೂರ್ತಿ ಸ್ವಾಮೀಜಿ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಯಾದಗಿರಿ ಜಿಲ್ಲಾ ಅಧ್ಯಕ್ಷ ಮಹೇಶ್ ತಳಿಬಿಡಿ, ದೇವಿದ್ರಪ್ಪ ಎಲ್., ಶಿವಣ್ಣ ವಿಶ್ವಕರ್ಮ, ಹನುಮಂತರಾಯ, ಬನಪ್ಪ ಕಾಳೆಬೆಳ್ಳಗುಂದಿ, ಬನಪ್ಪ ವಿಶ್ವಕರ್ಮ ಗೋಡಿಯಾಳ ಉಪಸ್ಥಿತರರಿದ್ದರು.

Leave a Reply

Your email address will not be published. Required fields are marked *

↑
Suddi Belaku