ಯಾದಗಿರಿ, ವಡಗೇರಾ ಬರ ಘೋಷಣೆ: ಶಾಸಕ ಚನ್ನಾರೆಡ್ಡಿ ತುನ್ನೂರ್‌ಗೆ ಸನ್ಮಾನ

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ : ಯಾದಗಿರಿ ಹಾಗೂ ವಡಗೇರಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರನ್ನು ಯಾದಗಿರಿ ಮತ್ತು ವಡಗೇರಾ ತಾಲೂಕಿನ ರೈತರು ಹಾಗೂ ಕಾಂಗ್ರೆಸ್ ಮುಖಂಡರು ಶಾಸಕರ ಕಾರ್ಯಾಲಯದಲ್ಲಿ ಸನ್ಮಾನಿಸಿದರು.

ಬರಪೀಡಿತ ತಾಲೂಕುಗಳ ಘೋಷಣೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ವಿವಿಧ ಬರ ಪರಿಹಾರ ಕ್ರಮಗಳು ಹಾಗೂ ಸೌಲಭ್ಯಗಳು ದೊರೆಯುವ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಬರ ಪರಿಸ್ಥಿತಿಯಿಂದಾಗಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಮೂಲಕ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಯತ್ನ ನಡೆದಿದೆ. ಮುಂದಿನ ಹಂತದಲ್ಲಿ ಅರ್ಹ ರೈತರಿಗೆ ಬರ ಪರಿಹಾರ, ಬೆಳೆ ನಷ್ಟ ಪರಿಹಾರ ಸೇರಿದಂತೆ ಸರ್ಕಾರದ ಸೌಲಭ್ಯಗಳು ತ್ವರಿತವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಈಟೆ, ವಡಗೇರಾ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕಾಜಾ ಮೈನೆದ್ದೀನ್ ಮಿರ್ಚಿ, ಸಾಬಣ್ಣ ಕೆಂಗುರಿ, ಶರಣಪ್ಪ ಕ್ಯಾತನಾಳ, ಮಲ್ಲಣ್ಣ ಕಸಬಿ, ಸಾಬಣ್ಣ ಬಾಡಿಯಾಳ, ಅಬ್ದುಲ್ ಚಿಗನೂರು, ಬೀರಲಿಂಗ ಪೂಜಾರಿ, ಬಸವರಾಜ್ ತುಮಕೂರು, ಅಯ್ಯಣ್ಣ ಬಾಗ್ಲಿ, ಹೈಯಾಳ ಬಿ., ಶಿವರಾಜಪ್ಪ ಹಾಲಗೇರಾ, ಸಾಬಣ್ಣ ಕ್ಯಾತನಾಳ, ಶಬ್ಬೀರ್ ನಾಯ್ಕಲ್, ಜಲಾಲ್ ಪಟೇಲ್, ಬಬಲಾದ್ ಸೇರಿದಂತೆ ಅನೇಕ ರೈತರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

You Might Also Like

Leave a Reply

Your email address will not be published. Required fields are marked *

Suddi Belaku