
ಸುದ್ದಿ ಬೆಳಕು ವಾರ್ತೆ
ಯಾದಗಿರಿ : ನಗರದ ನಜರತ್ ಕಾಲೋನಿಯಲ್ಲಿರುವ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಜೇಂದ್ರ ಕುಮಾರ್ ಯಾದವ್, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ (POCSO) ಕಾಯ್ದೆ, ಬಾಲ ನ್ಯಾಯ ಕಾಯ್ದೆ ಹಾಗೂ ವಿಶೇಷ ದತ್ತು ಕೇಂದ್ರಗಳ ಕಾರ್ಯಾಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ವಿವರಣೆ ನೀಡಿದರು. ಜೊತೆಗೆ, ಸಂಕಷ್ಟದಲ್ಲಿರುವ ಮಕ್ಕಳಿಗೆ ನೆರವಾಗುವ ‘ಮಕ್ಕಳ ಸಹಾಯವಾಣಿ 1098’ ಹಾಗೂ ಸರ್ಕಾರದಿಂದ ಲಭ್ಯವಿರುವ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತೆ ಕುಮಾರಿ ರಾಜೇಶ್ವರಿ, ಬಾಲಕಿಯರ ಪ್ರೌಢಶಾಲೆಯ ಮುಖ್ಯಗುರುಗಳಾದ ನಾಗೇಂದ್ರ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಂಡರು. ಸಹಾಯಕ ಶಿಕ್ಷಕಿ ಶ್ರೀಮತಿ ಶಾರದಾ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.











Leave a Reply